ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ಅವಶ್ಯ

hhr anveri
ಆನವೇರಿ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ ಸಮಾರಂಭವನ್ನು ಶಾಸಕಿ ಶಾರದಾ ಪೂರ‌್ಯಾನಾಯ್ಕಾ ಉದ್ಘಾಟಿಸಿದರು. ಸೈಯದ್ ಗೌಸ್, ನಟರಾಜ ಗೌಡ, ಸುಜಾತಾ ಗಿರೀಶ್, ಸುರೇಶ ಗೌಡ ಇತರರಿದ್ದರು.
Published on

ಹೊಳೆಹೊನ್ನೂರು: ಹೆಣ್ಣು ಮಕ್ಕಳ ಶಿಕ್ಷಣಕ್ಕೂ ಆದಷ್ಟು ಆದ್ಯತೆ ನೀಡಬೇಕು ಎಂದು ಗ್ರಾಮಾಂತರ ಶಾಸಕಿ ಶಾರದಾ ಪೂರ‌್ಯಾನಾಯ್ಕಾ ಹೇಳಿದರು.

ಆನವೇರಿಯಲ್ಲಿ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪಾಲಕರಿಗೆ ಆಂಗ್ಲ ಮಾಧ್ಯಮ ವ್ಯಾಮೋಹ ಹೆಚ್ಚಾಗುತ್ತಿದೆ. ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ದೊರೆಯುತ್ತಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಸುಧಾರಿತ ತಂತ್ರಜ್ಞಾನಗಳ ಬಳಕೆ ಕಡಿಮೆಯಾಗುತ್ತಿದೆ. ಮಕ್ಕಳ ಪ್ರತಿಭೆ ಅನಾವರಣಕ್ಕೆ ವಾರ್ಷಿಕೋತ್ಸವಗಳು ಸಹಕಾರಿ ಎಂದರು.

ಗ್ರಾಪಂ ಅಧ್ಯಕ್ಷ ನಟರಾಜ ಗೌಡ ಮಾತನಾಡಿ, ದಾನಿಗಳ ಸಹಕಾರದಿಂದ ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗುತ್ತಿವೆ. ಶೈಕ್ಷಣಿಕ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಸಹಕಾರ ಮರೆಯುವಂತಿಲ್ಲ. ಶಿಕ್ಷಕರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ಮಕ್ಕಳ ಜ್ಞಾನಾರ್ಜನೆ ಮಟ್ಟ ಹೆಚ್ಚಾಗುವುದರಲ್ಲಿ ಸಂದೇಹವಿಲ್ಲ. ಶಾಲೆಗಳು ಸುಣ್ಣ-ಬಣ್ಣದಿಂದ ಕಂಗೊಳಿಸಿದರೆ ಸಾಲದು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಬೇಕು ಎಂದರು.

ಶಾಲಾ ಸಮಿತಿ ಅಧ್ಯಕ್ಷ ಸೈಯದ್ ಗೌಸ್, ಗ್ರಾಪಂ ಉಪಾಧ್ಯಕ್ಷೆ ಸುಜಾತಾ ಗಿರೀಶ್, ಸುರೇಶ ಗೌಡ, ವಿಜಯ ಗೌಡ, ನಾಗರಾಜ್, ಶಫೀವುಲ್ಲ, ಅಮೀರ್ ಜಾನ್, ಎಸ್.ಪಿ. ರಾಜು, ಶ್ರೀನಿವಾಸ್, ಪ್ರಕಾಶ್, ಬಿ.ಟಿ.ಹನುಮಂತಪ್ಪ, ಎಂ.ದಾನೇಶ್, ಜಬೀವುಲ್ಲ, ಸೈಯದ್ ಆಸೀಫ್, ಸೈಯದ್ ಪರ್ವೀಜ್, ಸೈಯದ್ ಮುನ್ನ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net