ಶಿಕ್ಷಣ ತಜ್ಞರ ವಿಶೇಷ ಸಭೆ ಸೆ. 30ರಂದು

je721538035802367-abc
Published on

ರಾಣೆಬೆನ್ನೂರ: ಜಿಲ್ಲೆಯ ಪೀಪಲ್ಸ್ ಫೋರಮ್ ಫಾರ್ ಕರ್ನಾಟಕ ಏಜುಕೇಷನ್ ವತಿಯಿಂದ ಸೆ. 30ರಂದು ಸಂಜೆ 5.30ಕ್ಕೆ ಇಲ್ಲಿನ ವಾಗೀಶ ನಗರದ ಶ್ರೀ ವೀರಭದ್ರ ದೇವಸ್ಥಾನದ ಸಭಾಭವನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ -2020 ಕುರಿತು ಶಿಕ್ಷಣ ತಜ್ಞರ ವಿಶೇಷ ಸಭೆ ಆಯೋಜಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸದಸ್ಯ ಪ್ರೋ. ಎಸ್.ವಿ. ಸಂಕನೂರ, ಕೊಲ್ಲಾಪುರದ ಸಂಜಯ ಘೋಡಾವತ್ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ವೆಂಕಟೇಶ ರಾಯ್ಕರ್ ವಕ್ತಾರರಾಗಿ ಆಗಮಿಸುವರು. ಕಮದೋಡದ ರೈನ್‌ಬೋ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುರೇಶ ಸಿ.ಟಿ. ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net