ಪ್ರಕಾಶ್‌ಗೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ

27-anr-1
ಬೆಂಗಳೂರಿನಲ್ಲಿ ಶಿಕ್ಷಕ ಎಸ್.ಪ್ರಕಾಶ್ ಅವರಿಗೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಲೋಕಾಯುಕ್ತ ನ್ಯಾ. ಶುಭವೀರ್ ಜೈನ್ ಇತರರಿದ್ದರು.
Published on

ಆಯನೂರು: ಮಂಜರಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಎಸ್.ಪ್ರಕಾಶ್ ಅವರಿಗೆ ರಾಜ್ಯಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಲಭಿಸಿದೆ.

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬೆಂಗಳೂರಿನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಶಿಕ್ಷಣ ಪರಿಷತ್‌ನಿಂದ ಕರ್ನಾಟಕ ಪ್ರೆಸ್ ಕ್ಲಬ್ ಬೆಂಗಳೂರು ಸಹಯೋಗದಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಲೋಕಾಯುಕ್ತ ನ್ಯಾಯಮೂರ್ತಿ ಶುಭವೀರ್ ಜೈನ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಬಡವರ್ಗದ ಮಕ್ಕಳ ಬಗ್ಗೆ ವಿಶೇಷ ಆಸಕ್ತಿ ವಹಿಸುತ್ತಿರುವ ಪ್ರಕಾಶ್ ಅವರು, ಮಕ್ಕಳ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ನೀಡುತ್ತಾರೆ. ಮಾದರಿ ಶಾಲೆಯಾಗಿ ರೂಪಿಸಲು ಶ್ರಮಿಸುತ್ತಿದ್ದಾರೆ. ಕಲೆ, ಸಾಹಿತ್ಯ, ಕ್ರೀಡೆ, ಪರಿಸರ ಜಾಗೃತಿ, ನಾಟಕ, ಗಾಯನ ಹಾಗೂ ಸಮಾಜ ಸೇವೆ ಮಾಡುವ ಪ್ರಕಾಶ್ ಅವರಿಗೆ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಸಂದಿವೆ. ಇವರ ಸೇವೆ ಗುರುತಿಸಿ ಶಿಕ್ಷಣ ಸೇವಾರತ್ನ ಪ್ರಶಸ್ತಿ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net