ನೂತನ ಗ್ರಂಥಾಲಯ ನಿರ್ಮಾಣಕ್ಕೆ ಪ್ರಯತ್ನ

14-ಎಸ್ಕೆಪಿ-1ಗ್ರಂಥಾಲಯ
ತೊಗರ್ಸಿಯಲ್ಲಿ ಪ್ರಸ್ತುತ ಇರುವ ಗ್ರಂಥಾಲಯ.
Published on

ಶಿಕಾರಿಪುರ: ನೂತನ ಗ್ರಂಥಾಲಯ ನಿರ್ಮಾಣಕ್ಕೆ ಸಂಸದರ ನಿಧಿಯಿಂದ 32 ಲಕ್ಷ ರೂ. ಅನುದಾನಕ್ಕೆ ಮನವಿ ಮಾಡಲಾಗಿದೆ ಎಂದು ತೊಗರ್ಸಿ ಗ್ರಾಪಂ ಅಧ್ಯಕ್ಷ ನಿರಂಜನ್ ಹೇಳಿದರು.

ತೊಗರ್ಸಿಯಲ್ಲಿ ಗ್ರಂಥಾಲಯ ಪರಿಶೀಲಿಸಿ ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಓದುಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಹೊಸ ಕಟ್ಟಡ ನಿರ್ಮಾಣಕ್ಕೆ ಮನವಿ ಮಾಡಿದ್ದು ತಾತ್ಕಾಲಿಕವಾಗಿ ಕಾಲೇಜು ಆವರಣ ಅಥವಾ ಸೂಕ್ತ ಜಾಗದಲ್ಲಿ ಓದುಗರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.

ಈಗಿರುವ ಕಟ್ಟಡವನ್ನು ಬೇರೆ ಉದ್ದೇಶಕ್ಕೆ ಬಳಸಲಾಗುವುದು. ಡಿಜಿಟಲ್ ಗ್ರಂಥಾಲಯವನ್ನು ಸೂಕ್ತ ವ್ಯವಸ್ಥೆಯೊಂದಿಗೆ ಹೊಸ ಕಟ್ಟಡದಲ್ಲಿ ಆರಂಭಿಸಲಾಗುವುದು. ಶಾಶ್ವತವಾದ ನೂತನ ಕಟ್ಟಡ ನಿರ್ಮಿಸುವ ಪ್ರಯತ್ನ ನಡೆಯುತ್ತಿದೆ. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net