ಸ್ವಾರ್ಥರಹಿತ ಸಮಾಜ ನಿರ್ಮಾಣಕ್ಕೆ ಶ್ರಮ

kdr kasapa
ಕಡೂರು ರೋಟರಿ ಕ್ಲಬ್‌ನಲ್ಲಿ ಆಯೋಜಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ರೋಟರಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ.ಶಿವಕುಮಾರ್ ಉದ್ಘಾಟಿಸಿದರು. ಸೂರಿ ಶ್ರೀನಿವಾಸ್, ಕೆ.ಪಿ.ರಾಘವೇಂದ್ರ, ಸವಿತಾ ಸತ್ಯನಾರಾಯಣ ಇತರರಿದ್ದರು.
Published on

ಕಡೂರು: ಸ್ವಾರ್ಥರಹಿತ ಸಮಾಜ ನಿರ್ಮಿಸಲು ರೋಟರಿ ಸಂಸ್ಥೆ ಶ್ರಮಿಸುತ್ತಿದೆ ಎಂದು ರೋಟರಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ.ಶಿವಕುಮಾರ್ ಹೇಳಿದರು.
ಪಟ್ಟಣದ ರೋಟರಿ ಕ್ಲಬ್‌ನಲ್ಲಿ ಏರ್ಪಡಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ನಿಸ್ವಾರ್ಥ ಸೇವೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು. ಮಹಾಪುರುಷರು ನಿಸ್ವಾರ್ಥ ಸೇವೆಯಿಂದಲೇ ಸಮಸಮಾಜ ಕಟ್ಟಲು ಸಾಧ್ಯವಾಯಿತು. ಉತ್ತಮ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಕೈಜೋಡಿಸಬೇಕು ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ, ರೋಟರಿ, ಲಯನ್ಸ್ ಕ್ಲಬ್, ಕನ್ನಡ ಸಾಹಿತ್ಯ ಪರಿಷತ್ ನಿಸ್ವಾರ್ಥ ಸೇವೆ ಮೂಲಕ ಸಮಾಜದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ ಎಂದು ತಿಳಿಸಿದರು.
ಪ್ರಾಧ್ಯಾಪಕಿ ಜಿ.ವಿ.ಭಾಗ್ಯಾ ಉಪನ್ಯಾಸ ನೀಡಿದರು. ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಸಂತಾಪ ಸಲ್ಲಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ಕೆ.ಪಿ.ರಾಘವೇಂದ್ರ, ಕಡೂರು ತಾಲೂಕು ಕಸಾಪ ಅಧ್ಯಕ್ಷ ಸಂಘಟಗೆರೆ ಸಿದ್ದಪ್ಪ, ರೋಟರಿ ಕ್ಲಬ್ ಕಾರ್ಯದರ್ಶಿ ಸವಿತಾ ಸತ್ಯನಾರಾಯಣ, ಸದಸ್ಯರಾದ ಎಚ್.ವಿ.ಗಿರೀಶ್, ಟಿ.ಡಿ.ಸತ್ಯನ್, ರಘುರಾಮ್, ತಾಲೂಕು ಕಸಾಪ ಕಾರ್ಯದರ್ಶಿ ಕೊಪ್ಪಳ ಶಾಂತಮೂರ್ತಿ, ಚಂದ್ರಶೇಖರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net