ಕಾಫಿ ನಾಡಲ್ಲಿ ಈದ್ ಮಿಲಾದ್ ಸಂಭ್ರಮ

28 ckm 4a
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ನಡೆದ ಬೃಹತ್ ಮೆರವಣಿಗೆ.
Published on

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಈದ್ ಮಿಲಾದ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮೆರವಣಿಗೆಯಲ್ಲಿ ಏಳು ಸಾವಿರಕ್ಕೂ ಅಧಿಕ ಮುಸ್ಲಿಮರು ಭಾಗವಹಿಸಿದ್ದರು.

ಮಧ್ಯಾಹ್ನ 3ಕ್ಕೆ ನಗರದ ಅಂಡೆಛತ್ರದಿಂದ ಡಿಜೆ ಸಮೇತ ಆರಂಭಗೊಂಡ ಮೆರವಣಿಗೆ ಎಂ.ಜಿ.ರಸ್ತೆ, ಐಜಿ ರಸ್ತೆ, ಹನುಮಂತಪ್ಪ ಸರ್ಕಲ್ ಮೂಲಕ ಮತ್ತೆ ಎಂ.ಜಿ.ರಸ್ತೆಯಲ್ಲಿ ಸಾಗಿ ಅಂಡೆ ಛತ್ರದಲ್ಲಿ ಸಮಾಪನಗೊಂಡಿತು.
ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಶಾಹೀದ್ ರಜ್ವಿ ಮಾತನಾಡಿ, ಪ್ರವಾದಿಗಳ ಜನ್ಮದಿನವನ್ನು ನಾವು ಚಿಕ್ಕಮಗಳೂರಿನಲ್ಲಿ ಅದ್ದೂರಿಯಾಗಿ ಆಚರಿಸುತ್ತಿದ್ದೇವೆ. ಜನತೆಗೆ ಒಳಿತಾಗಿ, ಎಲ್ಲರೂ ಪ್ರವಾದಿಗಳ ಆದೇಶ ಪಾಲನೆ ಮಾಡುವಂತಾಗಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.
ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ವಾಹನ ಸಂಚಾರ ಹಾಗೂ ವಾಹನ ನಿಲುಗಡೆ ನಿಷೇಧಿಸಲಾಗಿತ್ತು. ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net