ಈದ್​ವಿುಲಾದ್ ಸರಳ ಆಚರಣೆ

30-hvr-05
Published on

ಹಾವೇರಿ: ಈದ್ ಮಿಲಾದ್ ಹಬ್ಬವನ್ನು ಶುಕ್ರವಾರ ಮುಸ್ಲಿಮರು ಜಿಲ್ಲೆಯಾದ್ಯಂತ ಸರಳವಾಗಿ ಆಚರಿಸಿದರು.

ಪ್ರವಾದಿ ಮಹಮ್ಮದ್ ಪೈಗಂಬರ್ ಜನ್ಮದಿನಾಚರಣೆ ಅಂಗವಾಗಿ ನಡೆಯುವ ಈದ್ ಮಿಲಾದ್ ಹಬ್ಬದಂದು ಪ್ರತಿವರ್ಷ ನಗರದಲ್ಲಿ ಭವ್ಯ ಮೆರವಣಿಗೆ ನಡೆಸಲಾಗುತ್ತಿತ್ತು. ಆದರೆ, ಈ ಬಾರಿ ಕರೊನಾ ಹಿನ್ನೆಲೆಯಲ್ಲಿ ಹಬ್ಬದ ಆಚರಣೆಗೆ ಸರ್ಕಾರ ಹೊರಡಿಸಿದ ಮಾರ್ಗಸೂಚಿ ಅನ್ವಯ ಯಾವುದೇ ಮೆರವಣಿಗೆ, ಸಾಮೂಹಿಕ ಪ್ರಾರ್ಥನೆ ಸಲ್ಲಿಸದೇ ಸರಳವಾಗಿ ಹಬ್ಬ ಆಚರಿಸಲಾಯಿತು. ತಮ್ಮ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಿದರು. ಹೊಸ ಬಟ್ಟೆಗಳನ್ನು ಧರಿಸಿ ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ನಗರದಲ್ಲಿ ಹಬ್ಬದ ನಿಮಿತ್ತ ಮುಸ್ಲಿಂ ಬಾಂಧವರ ಮನೆ, ಮಸೀದಿಗಳನ್ನು ವಿದ್ಯುತ್ ಅಲಂಕಾರ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net