

ಬೆಂಗಳೂರು: ಇಷ್ಟರಲ್ಲೇ ಬಿಜೆಪಿಯ ಎಂಟು ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದು ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿ.ಪಿ.ಯೋಗೇಶ್ವರ್ ಅವರಿಂದ ಚೆನ್ನಾಗಿ ದುಡಿಸಿಕೊಂಡು ಈಗ ಕೈಬಿಟ್ಟಿದ್ದಾರೆ. ಯೋಗೇಶ್ವರ್ ವಿಚಾರದಲ್ಲಿ ಬಿಜೆಪಿ ಈ ರೀತಿ ಮಾಡಬಾರದಿತ್ತು. ನನ್ನ ಮೇಲೆ ಯಾವುದೇ ಶಿಸ್ತು ಕ್ರಮ ಕೈಗೊಂಡರೂ ಭಯವಿಲ್ಲ ಎಂದು ಹೇಳಿದ್ದಾರೆ.
ನನಗೆ ನನ್ನ ಕ್ಷೇತ್ರದ ಅಭಿವೃದ್ಧಿಯಾಗಬೇಕು. ಹೀಗಾಗಿ ನಾನು ಬಿಜೆಪಿ ಶಾಸಕನಾಗಿದ್ದರೂ ಅಭಿವೃದ್ಧಿ ವಿಚಾರವಾಗಿ ಮುಖ್ಯಮಂತ್ರಿ ಮತ್ತು ಡಿಸಿಎಂಅವರನ್ನು ಭೇಟಿಯಾಗುತ್ತಿರುತ್ತೇನೆ. ಶೀಘ್ರವೇ ಬೆಂಗಳೂರಿನ ಇಬ್ಬರು ಶಾಸಕರು ಸೇರಿದಂತೆ ಒಟ್ಟು ಎಂಟು ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆಂದರು.