ಚುನಾವಣೆಯಲ್ಲಿ ವಿಜಯೇಂದ್ರ ಯುವ ಪಡೆ ಸಕ್ರೀಯ

by
Published on

ಬೆಂಗಳೂರು:
ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಜಿಲ್ಲೆಯಲ್ಲಿಯೂ ಬಿ.ವೈ.ವಿಜಯೇಂದ್ರ ಬೆಂಬಲಿತ ಯುವ ಪಡೆ ಕ್ರೀಯಾಶೀಲವಾಗಿ ಕೆಲಸ ಮಾಡಲು ಮುಂದಾಗಿದೆ.
ಕೋವಿಡ್ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಕಡೆಯಲ್ಲೂ ಸಕ್ರೀಯವಾಗಿ ಕೆಲಸ ಮಾಡಿದ್ದ ವಿಜಯೇಂದ್ರ ಬೆಂಬಲಿತ ಯುವ ಪಡೆ, ಈಗ ತನ್ನದೇ ಆದ ಜವಬ್ದಾರಿಯನ್ನು ನಿಭಾಯಿಸಲು ನಿರ್ಧರಿಸಿದೆ.
ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರು ಕಾರ್ಯ ನಿರ್ವಹಣೆ ಮಾಡುತ್ತಿರುವುದರಿಂದ ಅವರಿಗೆ ಇನ್ನಷ್ಟು ಸಾಥ್ ನೀಡಿ ಕೆಲಸ ಮಾಡಬೇಕಾಗಿರುವುದು ನಮ್ಮ ಜವಬ್ದಾರಿಯಾಗಿದೆ. ಆದ್ದರಿಂದ ಈ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಓಗೊಟ್ಟು ಯುವಕರೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಚರ್ಚಿಸಲಾಗಿದ್ದು, ಚುನಾವಣೆಯಲ್ಲಿ ಸಕ್ರೀಯವಾಗಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಿಜಯೇಂದ್ರ ಅವರ ನಾಯಕತ್ವ ಮುಸುಕಾಗುವಂತೆ ಕೆಲ ಶಕ್ತಿಗಳು ನಡೆಸುತ್ತಿರುವ ಕುತಂತ್ರವನ್ನು ಈ ಚುನಾವಣೆಯಲ್ಲಿ ಸೋಲಿಸಬೇಕಾದರೆ ಒಗ್ಗಟ್ಟು ಮುಖ್ಯವಾಗಿದೆ ಎಂದು ಯುವ ಪಡೆ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿಯೇ ರಾಜ್ಯದ ಎಲ್ಲೆಡೆ ಪ್ರವಾಸ ಮಾಡಿ ಚುನಾವಣೆಯಲ್ಲಿ ಪ್ರಚಾರ ಮಾಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net