ಮುಂದಿನ ಜನವರಿ ಕೊನೆ ವಾರದಲ್ಲಿ ಪಾಕ್​ ಚುನಾವಣೆ

Pak
Published on

ಇಸ್ಲಾಮಾಬಾದ್​: ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗಳು ಜನವರಿ 2024ರ ಕೊನೆಯ ವಾರದಲ್ಲಿ ನಡೆಯಲಿದೆ ಎಂದು ಪಾಕಿಸ್ತಾನ ಚುನಾವಣಾ ಆಯೋಗ ಪ್ರಕಟಿಸಿದೆ.

ಕ್ಷೇತ್ರಗಳ ವಿಂಗಡಣೆ ಕಾರ್ಯವನ್ನು ಪರಿಶೀಲಿಸಲಾಗಿದ್ದು, ಕ್ಷೇತ್ರಗಳ ವಿಂಗಡಣೆಯ ಪ್ರಾಥಮಿಕ ಪಟ್ಟಿಯನ್ನು ಸೆಪ್ಟೆಂಬರ್​ 27ರಂದು ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

54 ದಿನಗಳ ಚುನಾವಣಾ ಪ್ರಚಾರ ಕಾರ್ಯಕ್ರಮ ಮುಗಿದ ಬಳಿಕ ಜನವರಿ ಕೊನೆಯ ವಾರದಲ್ಲಿ ಚುನಾವಣೆ ನಡೆಯಲಿದೆ. ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ನಂತರ ಆಯೋಗವು 54 ದಿನಗಳ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net