ಶೀಘ್ರ ಚುನಾವಣೆ, ಶೀಘ್ರ ನಿಗಮ ಮಂಡಳಿ ನೇಮಕ

Congress (6)
Published on

ಬೆಂಗಳೂರು: ಹಿಂದಿನ ಸರ್ಕಾರಕ್ಕೆ ಅಧಿಕಾರ ವಿಕೇಂದ್ರಿಕರಣದಲ್ಲಿ ನಂಬಿಕೆ ಇಲ್ಲದ ಕಾರಣಕ್ಕೆ ಚುನಾವಣೆಗಳನ್ನೇ ನಡೆಸಿರಲಿಲ್ಲ, ನಾವೀಗ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಆದಷ್ಟು ಬೇಗ ನಡೆಸುತ್ತೇವೆ. ಬಿಬಿಎಂಪಿ ಚುನಾವಣೆ ನಮ್ಮ ಮೊದಲ ಆದ್ಯತೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು ರಾಹುಲ್ ಗಾಂಧಿ ಅವರು ಪಕ್ಷಕ್ಕೆ ಬಲ ನೀಡುವಂತಹ ನಾಯಕರಿಗೆ ನಿಗಮ ಮಂಡಳಿ ಸೇರಿದಂತೆ ಇತರೇ ಅಧಿಕಾರಗಳನ್ನು ಕೊಡಿ ಎಂದು ಸಲಹೆ ನೀಡಿದ್ದಾರೆ. ಅದರಂತೆ ಶೀಘ್ರದಲ್ಲೇ ಎಲ್ಲರ ಜತೆ ಚರ್ಚೆ ಮಾಡಿ, ನಿಯಮಾವಳಿ ರೂಪಿಸಿ ಪಕ್ಷದ ಎಲ್ಲಾ ಘಟಕಗಳ ಸದಸ್ಯರಿಗೆ ಸಮಾನವಾದ ಅವಕಾಶ ನೀಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net