ಜು.12ಕ್ಕೆ ಮೇಲ್ಮನೆ 1 ಸ್ಥಾನದ ಎಲೆಕ್ಷನ್

Vidhanasoudha
Published on

ಬೆಂಗಳೂರು: ಲೋಕಸಭೆ ಸದಸ್ಯ ಜಗದೀಶ ಶೆಟ್ಟರ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಬಳಿಕ ತೆರವಾಗಿದ್ದ ಒಂದು ವಿಧಾನ ಪರಿಷತ್ ಸ್ಥಾನಕ್ಕೆ ಜುಲೈ 12 ರಂದು ಚುನಾವಣೆ ನಡೆಯಲಿದೆ. ಈ ಸಂಬಂಧ ಕೇಂದ್ರ ಚುನಾವಣಾ ಆಯೋಗ ಮುಹೂರ್ತ ನಿಗದಿಪಡಿಸಿದೆ.

ಶೆಟ್ಟರ್ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ಕಾಂಗ್ರೆಸ್ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ಆದರೂ ಕಾಂಗ್ರೆಸ್ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಿತ್ತು. ಬಳಿಕ ಹಠಾತ್ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಬಿಟ್ಟು ಮತ್ತೆ ಬಿಜೆಪಿ ಸೇರ್ಪಡೆಗೊಂಡ ಜಗದೀಶ ಶೆಟ್ಟರ್ 2024ರ ಜ.25ರಂದು ರಾಜೀನಾಮೆ ಸಲ್ಲಿಸಿದ್ದರು. ಅವರ ಮೇಲ್ಮನೆ ಅವಧಿ 2028ರ ಜೂ.14ರವರೆಗಿತ್ತು. ಕಾಂಗ್ರೆಸ್ ತೊರೆದ ಬಳಿಕ ಶೆಟ್ಟರ್ ಬೆಳಗಾವಿಯಿಂದ ಲೋಕಸಭೆ ಸದಸ್ಯರಾಗಿ ಚುನಾಯಿತರಾಗಿದ್ದಾರೆ.

ಜೂ.25ರಿಂದ ನಾಮಪತ್ರ ಸಲ್ಲಿಕೆ

ಶೆಟ್ಟರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಜೂ.25 ರಂದು ಅಧಿಸೂಚನೆ ಪ್ರಕಟಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಜು.2 ಕೊನೆಯ ದಿನ. ಜುಲೈ 3 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ಜು.5 ಕೊನೆಯ ದಿನ. ಜು.12 ರಂದು ಬೆಳಗ್ಗೆ 9 ರಿಂದ ಸಂಜೆ 4 ರ ವರೆಗೆ ಮತದಾನ ನಡೆಯಲಿದೆ. ಅಂದೇ ಚುನಾವಣಾ ಲಿತಾಂಶ ಪ್ರಕಟಿಸಲಾಗುತ್ತದೆ.

ಅವಿರೋಧ ಆಯ್ಕೆ ಫಿಕ್ಸ್

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಈ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ಬಸನಗೌಡ ಬಾದರ್ಲಿ ಅವರಿಗೆ ಟಿಕೆಟ್ ೋಷಿಸಿದೆ. ವಿಧಾನಸಭೆ ಸದಸ್ಯ ಬಲದ ಆಧಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅವಿರೋಧವಾಗುವ ಸಾಧ್ಯತೆ ಹೆಚ್ಚಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net