ಕೆ.ಸುಧಾಕರ್‌ಗೆ ಚುನಾವಣಾ ಉಸ್ತುವಾರಿ

ಆರೋಗ್ಯ ಸಚಿವ ಡಾ. ಕೆ ಸುಧಾಕರ್​
ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ. ಕೆ ಸುಧಾಕರ್​
Published on

ಬೆಂಗಳೂರು: ರಾಜ್ಯದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಚಿವ ಡಾ.ಸುಧಾಕರ್ ಅವರಿಗೆ ಬಿಜೆಪಿ ವರಿಷ್ಠರು ಈಗ ಮತ್ತೊಂದು ಜವಾಬ್ದಾರಿ ನೀಡಿದೆ.

ಆಂಧ್ರಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷೆ ಹಾಗು ಮಾಜಿ ಮುಖ್ಯಮಂತ್ರಿ ಎನ್‌ಟಿಆರ್ ಪುತ್ರಿ ಪುರಂದೇಶ್ವರಿ ಸ್ಪರ್ಧೆ ಮಾಡುತ್ತಿರುವ ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಉಸ್ತುವಾರಿಯಾಗಿ ಸುಧಾಕರ್ ಅವರನ್ನು ನೇಮಿಸಿದೆ.

ತೆಲುಗು ಭಾಷೆಯ ಮೇಲೆ ಹಿಡಿತ ಹಾಗು ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ತಮ್ಮದೇ ಆದ ಪ್ರಭಾವ ಹೊಂದಿರುವ ಸುಧಾಕರ್‌ಗೆ ಈ ಹಿಂದೆ ಕೂಡ ಬಿಜೆಪಿ ವರಿಷ್ಠರು ಹೈದರಾಬಾದ್ ಮಹಾನಗರ ಪಾಲಿಕೆ ಹಾಗು ತೆಲಂಗಾಣ ವಿಧಾನಸಭಾ ಚುನಾವಣೆಗಳಲ್ಲಿ ಜವಾಬ್ದಾರಿ ನೀಡಿತ್ತು. ಈಗ ಮತ್ತೊಮ್ಮೆ ಆಂಧ್ರಪ್ರದೇಶದಲ್ಲಿ ಸುಧಾಕರ್ ಅವರ ಸಂಘಟನಾ ಚತುರತೆ ಬಳಸಿಕೊಳ್ಳಲು ಮುಂದಾಗಿದೆ. ಈ ಮೂಲಕ ಅವರ ಸಾಮರ್ಥ್ಯದ ಮೇಲಿರುವ ವಿಶ್ವಾಸ ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net