ಪ್ರಜ್ವಲ್​​​ ರೇವಣ್ಣಗೆ ಹೀನಾಯ ಸೋಲು; ಪೆನ್​ ಡ್ರೈವ್​​ ಕೇಸ್​​ನಲ್ಲಿ ಸಿಲುಕಿರುವ ಪ್ರಜ್ವಲ್​​ಗೆ ಮರ್ಮಾಘಾತ

Prajwal Revanna
Published on

ಬೆಂಗಳೂರು: ದೇಶಕ್ಕೆ ದೇಶವೇ ಕುತೂಹಲದಿಂದ ಕಾಯುತ್ತಿರುವ ಲೋಕಸಭೆ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಎನ್‌ಡಿಎ ಮೈತ್ರಿಕೂಟವು ಆರಂಭದಲ್ಲಿಯೇ ಭರ್ಜರಿ ಮುನ್ನಡೆ ಸಾಧಿಸಿದೆ. ಹಾಸನ ಜೆಡಿಎಸ್​​ ಅಭ್ಯರ್ಥಿಯಾಗಿರುವ ಪ್ರಜ್ವಲ್​ ರೇವಣ್ಣ ಅವರು ಹೀನಾಯ ಸೋಲು ಅನುಭವಿಸಿದ್ದಾರೆ.

ಹಾಸನ ಜೆಡಿಎಸ್​​ ಅಭ್ಯರ್ಥಿಯಾಗಿರುವ ಪ್ರಜ್ವಲ್​ ರೇವಣ್ಣ ಸೋತಿದ್ದಾರೆ. ಪೆನ್​ ಡ್ರೈವ್​​ ಕೇಸ್​​ನಲ್ಲಿ ಸಿಲುಕಿರುವ ಪ್ರಜ್ವಲ್​​ ರೇವಣ್ಣ ಅವರಿಗೆ ಮರ್ಮಾಘಾತವಾಗಿದೆ. ಕೈ ಅಭ್ಯರ್ಥಿಯಾಗಿರುವ ಶ್ರೇಯಸ್​ ಪಟೇಲ್​​ ಅವರ ಗೆಲುವಿನ ಬಗ್ಗೆ ಅಧಿಕೃತ ಘೋಷಣೆಯೊಂದೆ ಬಾಕಿ ಇದೆ.

ಲೋಕಸಭೆ ಚುನಾವಣೆಯ ಮತಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಅಭ್ಯರ್ಥಿಗಳ ಮುನ್ನಡೆ ಹಾಗೂ ಹಿನ್ನಡೆ ಕುರಿತು ಚರ್ಚಿಸಲಾಗುತ್ತಿದೆ. ಒಟ್ಟು 543 ಕ್ಷೇತ್ರಗಳ ಪೈಕಿ ಎನ್‌ಡಿಎ ಮೈತ್ರಿಕೂಟವು (NDA) 294 ಕ್ಷೇತ್ರಗಳಲ್ಲಿ ಮುನ್ನಡೆ (Election Results 2024) ಸಾಧಿಸಿದೆ. ಅತ್ತ, ಇಂಡಿಯಾ ಒಕ್ಕೂಟವೂ (India Bloc) ತೀವ್ರ ಪೈಪೋಟಿ ನೀಡುತ್ತಿದ್ದು, 230 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net