

ಹೈದಾರಾಬಾದ್: 2024 ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯ ಸೆಮಿಫೈನಲ್ ಎಂದು ಪರಿಗಣಿಸಲಾಗುತ್ತಿರುವ 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಪೂರ್ಣಗೊಂಡಿದೆ.
ಇಂದು ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮಿಜೋರಾಂನಲ್ಲಿ ಡಿಸೆಂಬರ್ 4 ರಂದು ಮತ ಎಣಿಕೆ ನಡೆಯಲಿದೆ. ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಕಂಡುಬಂದರೆ, ತೆಲಂಗಾಣದಲ್ಲಿ ಬಿಆರ್‌ಎಸ್ ಮತ್ತು ಕಾಂಗ್ರೆಸ್ ನಡುವೆ ನಿಜವಾದ ಫೈಟ್ ನಡೆಯಲಿದೆ.
ಚುನಾವಣಾ ಆಯೋಗದ ಟ್ರೆಂಡ್ ಪ್ರಕಾರ ತೆಲಂಗಾಣದಲ್ಲಿ ಕಾಂಗ್ರೆಸ್ 52 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೈದರಾಬಾದ್‌ನಲ್ಲಿರುವ ಪಕ್ಷದ ಕಚೇರಿಯ ಹೊರಗೆ ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ತೆಲಂಗಾಣ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರಿದಿದ್ದು, ಪಕ್ಷವು ವಿಶೇಷ ಟ್ವೀಟ್ ಮಾಡಿದೆ.