

ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ವೇಳಾ ಪಟ್ಟಿ ಪ್ರಕಟಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಮೈಸೂರು, ಚಾಮರಾಜಕನಗರ, ಹಾಸನ, ಮಂಡ್ಯ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಗದಗ, ಹಾವೇರಿ, ಉತ್ತರ ಕನ್ನಡ, ಕಲಬುರಗಿ, ಬೀದರ್, ಬಳ್ಳಾರಿ,ವಿಜಯನಗರ, ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳ 195 ತಾಲೂಕುಗಳ 531 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ 641 ವಾರ್ಡ್‌ಗಳಿಗೆ ಚುನಾವಣೆ ಘೋಷಣೆಯಾಗಿದೆ.
ಅಧಿಸೂಚನೆ ದಿನಾಂಕ: ನವೆಂಬರ್ 6
ನಾಮಪತ್ರ ಸಲ್ಲಿಸಲು ಕೊನೆಯ ದಿನ: ನವೆಂಬರ್ 12
ನಾಮಪತ್ರ ಪರಿಶೀಲನೆ: ನವೆಂಬರ್ 13
ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನ: ನವೆಂಬರ್ 15
ಮತದಾನ ದಿನ : ನವೆಂಬರ್ 23
ಮರುಮತದಾನ ಅವಶ್ಯವಿದ್ದಲ್ಲಿ: ನವೆಂಬರ್ 25
ಮತ ಎಣಿಕೆ : ನವೆಂಬರ್ 26
ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಖಾಲಿ ಸ್ಥಾನಗಳಗಿಎ ಉಪಚ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೊಗ ವೇಳಾಪಟ್ಟಿ ಪ್ರಕಟಿಸಿದೆ.
17 ಜಿಲ್ಲೆಗಳ 43 ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ವಾರ್ಡ್‌ಗಳಿಗೆ ನವೆಂಬರ್ 23 ರಂದು ಚುನಾವಣೆ ನಡೆಯಲಿದೆ.
ಈ ಸ್ಥಾನಗಳಿಗೆ ನವೆಂಬರ್ 4 ರಂದು ಆಯಾ ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಿಸಿದ್ದಾರೆ. ನಾಮಪತ್ರ ಸಲ್ಲಿಸಲು ನವೆಂಬರ್ 11 ಕೊನೆಯ ದಿನವಾಗಿದೆ. ನಾಮಪತ್ರ
ಪರಿಶೀಲನೆ ನವೆಂಬರ್ 12 ರಂದು ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ನವೆಂಬರ್ 14 ಕೊನೆಯ ದಿನವಾಗಿದೆ. ನವೆಂಬರ್ 26 ರಂದು ಮತ ಎಣಿಕೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.