ವಾಮಮಾರ್ಗದಲ್ಲಿ ಚುನಾವಣೆ ಗೆಲುವು: ಜೆಡಿಎಸ್ ಟೀಕೆ|Election victory on the Left: JDS criticized

JDS LOGO
Published on

ಬೆಂಗಳೂರು: ಕಾಂಗ್ರೆಸ್ ಐರೆನ್ ಲೆಗ್ ಪಾರ್ಟಿ. ಕರ್ನಾಟಕದಲ್ಲಿ ವಾಮಮಾರ್ಗದಲ್ಲಿ 3 ವಿಧಾನಸಭಾ ಉಪ ಚುನಾವಣೆ ಗೆದ್ದು ಮೆರೆಯುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.

ನಶಿಸುತ್ತಿರುವ ಶತಮಾನಗಳ ಪಳೆಯುಳಿಕೆ ಕಾಂಗ್ರೆಸ್ ಪಕ್ಷದ ಪಕಳೆಗಳು ದೇಶಾದ್ಯಂತ ಒಂದೊಂದೇ ಉದುರುತ್ತಿವೆ. ಮಹಾರಾಷ್ಟ್ರದಲ್ಲಿ ನೆಲಕಚ್ಚಿದೆ. ಅಲ್ಲಿ 6ನೇ ಸ್ಥಾನಕ್ಕೆ, ಜಾರ್ಖಂಡ್‌ನಲ್ಲಿ 3ನೇ ಸ್ಥಾನಕ್ಕೆ ಜಾರಿದೆ. ಆದರೂ ಕರ್ನಾಟಕದಲ್ಲಿ ವಾಮಮಾರ್ಗದಲ್ಲಿ ಗೆದ್ದ 3 ಬೈಎಲೆಕ್ಷನ್ ಸೀಟುಗಳನ್ನು ಮುಖದ ಮೇಲಿಟ್ಟುಕೊಂಡು ಮೆರೆಯುತ್ತಿದೆ, ಮೆರೆಯಲಿ ಎಂದು ಜೆಡಿಎಸ್ ಟಾಂಗ್ ಕೊಟ್ಟಿದೆ.

ಮಹಾರಾಷ್ಟ್ರದಲ್ಲಿ ಮತದಾರರು ಕೈ ಪಕ್ಷದ ಪೋಸ್ಟ್ ಮಾರ್ಟಮ್ ಮಾಡಿದ್ದಾರೆ. 288 ಸೀಟುಗಳ ಮಹಾರಾಷ್ಟ್ರದಲ್ಲಿ ಹದಿನಾರೇ ಸೀಟಿಗೆ ಬೋರಲು ಬಿದ್ದ ಸೋಕಾಲ್ಡ್ ನ್ಯಾಷನಲ್ ಪಾರ್ಟಿ ನಾಯಕರೇ ಇನ್ನೊಬ್ಬರ ಬಚ್ಚಲು ಮನೆ ಮೂಸಿ ನೋಡುವ ಚಟ ಬಿಡಿ ಎಂದು ವ್ಯಂಗ್ಯವಾಡಿದೆ.

ಜಾರ್ಖಂಡ್ ಜೆಎಂಎಂ ಪರಾವಲಂಬಿಯಾಗಿ ಪರದೇಸಿ ಬಾಳ್ವೆ ಮಾಡಿಕೊಂಡು 81 ಸೀಟಿನ ಪೈಕಿ ಹದಿನಾರಕ್ಕೆ ಅಡ್ಡಡ್ಡ ಬಿದ್ದ ನಿಮ್ಮ ಪಕ್ಷಕ್ಕೆ ಅಲ್ಲಿಯೂ ಜನ ಚಟ್ಟ ಕಟ್ಟಿದ್ದಾರೆ ಎಂದು ಜೆಡಿಎಸ್ ಲೇವಡಿ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net