ಗ್ರಾಪಂ 260 ಸದಸ್ಯ ಸ್ಥಾನಗಳಿಗೆ ಚುನಾವಣೆ ಘೋಷಣೆ|Elections

eci voting
Published on

ಬೆಂಗಳೂರು: ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಗ್ರಾಮ ಪಂಚಾಯಿತಿ 260 ಸದಸ್ಯ ಸ್ಥಾನಗಳಿಗೆ(Elections announced for 260 Gram Panchayat member seats) ರಾಜ್ಯ ಚುನಾವಣಾ ಆಯೋಗ ಅಧಿಸೂಚನೆ ಪ್ರಕಟಿಸಿದೆ. 31 ಜಿಲ್ಲೆಯ 133 ತಾಲೂಕುಗಳ 222 ಗ್ರಾಮ ಪಂಚಾಯಿತಿಗಳಲ್ಲಿನ 260 ಸದಸ್ಯ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

ವೇಳಾಪಟ್ಟಿ

ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸುವ ದಿನಾಂಕ: ಏ.22

ನಾಮಪತ್ರ ಸಲ್ಲಿಸಲು ಕೊನೆಯ ದಿನ: ಏ.28

ನಾಮಪತ್ರ ಪರಿಶೀಲನೆ ದಿನಾಂಕ: ಏ.29

ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನ: ಮೇ 2

ಮತದಾನ ದಿನ: ಮೇ 11

ಮರುಮತದಾನ ಅವಶ್ಯವಿದ್ದರೆ ಮತದಾನ ನಡೆಯುವ ದಿನ: ಮೇ 13

ಮತ ಎಣಿಕೆ: ಮೇ 14(ಬೆಳಗ್ಗೆ 8 ರಿಂದ)

ನೀತಿ ಸಂಹಿತೆ

ಚುನಾವಣೆ ನೀತಿ ಸಂಹಿತೆ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಏ.22 ರಿಂದ ಮೇ 14ರ ವರೆಗೆ ಜಾರಿಯಲ್ಲಿರುತ್ತದೆ.

ಗ್ರಾಮ ಪಂಚಾಯಿತಿಯ ಯಾವುದೇ ಕ್ಷೇತ್ರದಲ್ಲಿ ನಾಮಪತ್ರ ಸ್ವೀಕೃತವಾಗದೇ ಚುನಾವಣೆ ಪ್ರಕ್ರಿಯೆ ಮುಂದುವರೆಯಲಾಗದೆ ಇರುವ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ/ನಾಮಪತ್ರ ಹಿಂತೆಗೆತ ಇತ್ಯಾದಿ ಕಾರಣಗಳಿಂದ ಯಾವುದೇ ಅಭ್ಯರ್ಥಿ ಕಣದಲ್ಲಿರದೇ ಆ ಗ್ರಾಮ ಪಂಚಾಯಿತಿಯ ಯಾವುದೇ ಸ್ಥಾನಕ್ಕೂ ಚುನಾವಣೆ ನಡೆಯದೇ ಇದ್ದಲ್ಲಿ ಅಥವಾ ಗ್ರಾಮ ಪಂಚಾಯಿತಿಯಲ್ಲಿನ ಚುನಾವಣೆ ಘೋಷಿಸಿರುವ ಎಲ್ಲ ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆಯಾಗಿದ್ದು, ಆಯ್ಕೆಯಾದ ಅಭ್ಯರ್ಥಿ ಲಿತಾಂಶವನ್ನು ೋಷಿಸಿದ್ದಲ್ಲಿ ಅಂತಹ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದು ತಕ್ಷಣದಿಂದ ನಿಂತು ಹೋಗುತ್ತದೆ.

ಬೀದರ್ ಜಿಲ್ಲೆಯ ಗ್ರಾಮ ಪಂಚಾಯಿತಿಗಳಿಗೆ ಇಸಿಐಎಲ್ ಹೈದ್ರಾಬಾದ್ ಅವರು ತಯಾರಿಸಿರುವ ಮಲ್ಟಿ ಚಾಯ್ಸ ವಿದ್ಯುನ್ಮಾನ ಮತಯಂತ್ರ(ಇವಿಎಂ) ಮೂಲಕ ಚುನಾವಣೆ ನಡೆಸಲಾಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net