ಹೆಸರು ಸೇರ್ಪಡೆಗೆ ಆಫ್‌ಲೈನ್‌ನಲ್ಲೂ ಅವಕಾಶ ಕೊಡಿ

4 smg 2
Published on

ಶಿವಮೊಗ್ಗ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಆಫ್‌ಲೈನ್‌ನಲ್ಲಿ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕಿ ರೇಖಾ ರಂಗನಾಥ ನೇತೃತ್ವದಲ್ಲಿ ಕಾಂಗ್ರೆಸ್ ಸದಸ್ಯರು ಮತ್ತು ಮುಖಂಡರು ಶುಕ್ರವಾರ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಿದರು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆದೇಶಿಸಿದ್ದು ಆನ್‌ಲೈನ್‌ನಲ್ಲಿ ಮತದಾರರ ಪಟ್ಟಿಗೆ ಸೇರಿಸುವ ಬಗ್ಗೆ ಮಾಹಿತಿ ಇಲ್ಲದ ಕಾರಣ ಸಾರ್ವಜನಿಕರಿಗೆ ಗೊಂದಲ ಆಗುತ್ತಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದರ ಬಗ್ಗೆ ಜನರಿಗೆ ಸಮರ್ಪಕ ಮಾಹಿತಿ ಇಲ್ಲ. ಆಂಡ್ರಾಯ್ಡ್ ಮೊಬೈಲ್ ಇದ್ದವರಿಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಸೈಬರ್ ಸೆಂಟರ್‌ಗಳಲ್ಲಿ ಸಲ್ಲಿಸಿದ ಅರ್ಜಿಗಳಲ್ಲಿ ಸಾಕಷ್ಟು ತಪ್ಪುಗಳಾಗುತ್ತಿವೆೆ ಎಂದು ದೂರಿದರು.

ಇದರಿಂದ ತಿದ್ದುಪಡಿಗಾಗಿ ಮೇಲಿಂದ ಮೇಲೆ ಸೈಬರ್ ಸೆಂಟರ್ ಹೋಗಬೇಕಿದೆ. ಹಣ ಕೊಡಬೇಕಾಗಿದೆ. ಚುನಾವಣೆ ಸಮೀಪಿಸುತ್ತಿರುವ ಕಾರಣ ಈ ಸಂದರ್ಭದಲ್ಲಿ ಯಾವುದೇ ರೀತಿ ತೊಂದರೆ ಆಗದಂತೆ ತುರ್ತಾಗಿ ಮೊದಲಿದ್ದ ರೀತಿಯಲ್ಲಿ ಹೊಸ ಮತದಾರರನ್ನು ಪಟ್ಟಿಗೆ ಸೇರಿಸಲು ಆಫ್‌ಲೈನ್ ಅರ್ಜಿಯನ್ನು ಪಾಲಿಕೆ ಮುಖಾಂತರ ಸಾರ್ವಜನಿಕರಿಗೆ ಕೊಟ್ಟಲ್ಲಿ ಅನುಕೂಲವಾಗುತ್ತದೆ ಎಂದು ಒತ್ತಾಯಿಸಿದರು.

ಮಹಾನಗರ ಪಾಲಿಕೆ ಸದಸ್ಯರಾದ ಎಚ್.ಸಿ.ಯೋಗೇಶ್, ಬಿ.ಎ.ರಮೇಶ್ ಹೆಗ್ಡೆ, ಆರ್.ಸಿ.ನಾಯ್ಕ, ಯಮುನಾ ರಂಗೇಗೌಡ, ಮೆಹೆಕ್ ಷರೀಫ್, ಮುಖಂಡರಾದ ಕೆ.ರಂಗನಾಥ್, ರಂಗೇಗೌಡ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ.ಗಿರೀಶ್, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಮೋಹನ್ ಸೋಮಿನಕೊಪ್ಪ, ಶರತ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net