ಸಂಸದರ ಫ್ಲ್ಯಾಟ್ ವಿದ್ಯುತ್ ಸಂಪರ್ಕ ಕಟ್

Sagar Khandre
Published on

ಬೆಂಗಳೂರು: ಬೀದರ್ ಲೋಕಸಭಾ ಸದಸ್ಯ ಸಾಗರ ಖಂಡ್ರೆ ಫ್ಲ್ಯಾಟ್ ನ ವಿದ್ಯುತ್ ಸಂಪರ್ಕ ಕಡಿತ ಮಾಡಿದ ಅಪಾರ್ಟ್‌ಮೆಂಟ್ ವ್ಯವಸ್ಥಾಪಕ ಸೇರಿ ಇತರರ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆಪ್ತ ಸಹಾಯಕ ಸತೀಶ್ ದೂರು ಸಲ್ಲಿಸಿದ್ದಾರೆ. ಇದರ ಮೇರೆಗೆ ಅಲಿ ಅಸ್ಕರ್ ರಸ್ತೆ ಶ್ರೀಕೃಷ್ಣ ಅಪಾರ್ಟ್‌ಮೆಂಟ್ ಮ್ಯಾನೇಜರ್ ಚಂದ್ರಕುಮಾರ್ ಮತ್ತು ಕಾರ್ಯದರ್ಶಿ ವಿರುದ್ಧ ಎ್ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀ ಕೃಷ್ಣ ಅಪಾರ್ಟ್‌ಮೆಂಟ್‌ನ ಬ್ಲಾಕ್-1ರ ನಂ.103 ಫ್ಲ್ಯಾಟ್ ನಲ್ಲಿ ಸಾಗರ್ ಖಂಡ್ರೆ ಇದ್ದಾರೆ. ನವೀಕರಣ ಉದ್ದೇಶದಿಂದ ಅಪಾರ್ಟ್‌ಮೆಂಟ್ ಸೊಸೈಟಿಯಿಂದ ಪೂರ್ವಾನುಮತಿ ಪಡೆದು ಏ.2ರಂದು ವಿದ್ಯುತ್ ತಂತಿ ಎಳೆದುಕೊಂಡು ಕೆಲಸ ಮಾಡುತ್ತಿದ್ದರು.

ಅಲ್ಲಿಗೆ ಬಂದ ಚಂದ್ರಕುಮಾರ್, ಕೆಲಸಗಾರರಿಗೆ ಅಸಭ್ಯ ಪದಗಳಿಂದ ನಿಂದಿಸಿ ್ಲ್ಯಾಟ್ ಮಾಲೀಕರಿಗೆ ಯಾವುದೇ ವಿಷಯ ತಿಳಿಸದೆ ಏಕಾಏಕಿ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದಾರೆ. ವಿನಾಕಾರಣ ತಗಾದೆ ತೆಗೆದಿರುವ ಈ ಇಬ್ಬರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net