ವಿದ್ಯುತ್ ತಗುಲಿ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವು

Crime Logo
Published on

ಹಾವೇರಿ: ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ನಗರದ ಕಲ್ಲುಮಂಟಪ ಓಣಿಯಲ್ಲಿ ಬುಧವಾರ ಸಂಭವಿಸಿದೆ.
ಕಾಂತೇಶ ಶಿವಪ್ಪ ಮಡಿವಾಳರ (31) ಮೃತ ವ್ಯಕ್ತಿ.
ಇವರು ದುರಗಪ್ಪ ಎಂಬುವರ ಮನೆಯಲ್ಲಿ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ಸಮಯದಲ್ಲಿ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net