ಆನೆ ಕಾರ್ಯಪಡೆ ರಚನೆ: ಈಶ್ವರ ಖಂಡ್ರೆ

ESHWAR KANDRE congress
Published on

ಬೆಂಗಳೂರು:
ಆನೆಗಳ ದಾಳಿ ತಪ್ಪಿಸಲು ಕಾರ್ಯಪಡೆ ರಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರು ಗ್ರಾಮಾಂತರ ಬನ್ನೇರುಘಟ್ಟ ಮತ್ತು ರಾಮನಗರದಲ್ಲಿ ಹೆಚ್ಚುವರಿಯಾಗಿ ಎರಡು ಆನೆ ಕಾರ್ಯಪಡೆ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ರಾಮನಗರ, ಬನ್ನೇರುಘಟ್ಟ, ಬಂಡೀಪುರ ಸೇರಿ 8 ಜಿಲ್ಲೆಗಳಲ್ಲಿ ಕಾರ್ಯಪಡೆಗಳಿದ್ದು, ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.

ಆನೆಕಾರಿಡಾರ್ ಯೋಜನೆ
ಆನೆಗಳ ಕಾರಿಡಾರ್ ಮಾಡಬೇಕು ಎನ್ನುವ ನಿಟ್ಟಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಬಂದಿದೆ. ಸಕಲೇಶಪುರ ಮತ್ತಿತರ ಭಾಗದಲ್ಲಿ ಕಾರಿಡಾರ್‌ಗೆ ತಮ್ಮದೇ ಜಮೀನು ಬಿಟ್ಟುಕೊಡಲು ರೈತರು ಮುಂದೆ ಬಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಅನುದಾನ ಅಗತ್ಯವಿದ್ದು, ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

36 ವನ್ಯಜೀವಿ ಅಭಯಾರಣ್ಯ
ರಾಜ್ಯದಲ್ಲಿ ಒಟ್ಟು 43,382.76 ಚದರ ಕಿಲೋ ಮೀಟರ್ ಅರಣ್ಯ ಪ್ರದೇಶ ಇದ್ದು, ಈ ಪೈಕಿ 11,318.358 ಚದರ ಕಿಲೋ ಮೀಟರ್ ಸಂರಕ್ಷಿತ ಅರಣ್ಯ ಪ್ರದೇಶವಿದೆ. ರಾಜ್ಯದಲ್ಲಿ 5 ರಾಷ್ಟ್ರೀಯ ಉದ್ಯಾನಗಳು, 36 ವನ್ಯಜೀವಿ ಅಭಯಾರಣ್ಯಗಳು, 19 ಸಂರಕ್ಷಿತ ಮೀಸಲು ಹಾಗೂ 1 ಸಮುದಾಯ ಮೀಸಲು ಅರಣ್ಯವಿದೆ. 5 ಹುಲಿ ಸಂರಕ್ಷಿತ ತಾಣಗಳಿವೆ ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net