ಹಂತ ಹಂತವಾಗಿ ಅಭಿವೃದ್ಧಿ ಕೆಲಸಗಳಿಗೆ ಒತ್ತು

30BTP01
ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಕುಂದುಕೊರತೆ ಸಭೆಯಲ್ಲಿ ಸಚಿವ ಕೆ.ವೆಂಕಟೇಶ್ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದರು. ನಿತಿನ್ ವೆಂಕಟೇಶ್, ಡಿ.ಟಿ ಸ್ವಾಮಿ, ರಹಮತ್ ಜಾನ್ ಬಾಬು, ಶಶಿಕಲಾ, ಸರಸ್ಪತಿ, ಕಾಳೇಗೌಡ, ರಾಮೇಗೌಡ ಇದ್ದರು.
Published on

ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನಲ್ಲಿ ಹಂತ ಹಂತವಾಗಿ ಕೆಲಸಗಳನ್ನು ಮಾಡುವ ಮೂಲಕ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ರೇಷ್ಮೆ ಸಚಿವ ಕೆ.ವೆಂಕಟೇಶ್ ಹೇಳಿದರು.

ಸಮೀಪದ ಚಪ್ಪರದಹಳ್ಳಿ ಗ್ರಾಮದ ಶ್ರೀ ಕೊಳ್ಳಿ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಈಗಾಗಲೇ ಅಧಿಕಾರಿಗಳೊಂದಿಗೆ ಪ್ರವಾಸ ಕೈಗೊಂಡು ಸಾರ್ವಜನಿಕರಿಂದ ಸಮಸ್ಯೆಗಳ ಅಹವಾಲು ಸ್ವೀಕರಿಸಲಾಗಿದೆ. ಅಲ್ಲದೆ ಸಮಸ್ಯೆಗಳನ್ನು ಬಗೆಹರಿಸುವಂತೆ ಸ್ಥಳದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಗ್ರಾಮ ಪಂಚಾಯಿತಿ ಸೇರಿದಂತೆ ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾನೂನಾತ್ಮಕವಾಗಿ ಕೆಲಸ ನಿರ್ವಹಿಸಬೇಕು. ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳಿಗೆ ಮೊದಲಿನ ಆದ್ಯತೆ ನೀಡಬೇಕು. ಪಂಚಾಯತಿ ಸದಸ್ಯರು ಪಕ್ಷಭೇದ ಮರೆತು ಕೆಲಸ ಮಾಡಿದರೆ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದರು.

ಸಮೀಪದ ಹಳಿಯೂರ, ವಡ್ಡರಬೈಲಕುಪ್ಪೆ, ಹುಣಸೆಕೊಪ್ಪಲು, ಕುಮಾರಿಕೊಪ್ಪಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸಾರ್ವಜನಿ ಕರಿಂದ ಅಹವಾಲು ಸ್ವೀಕಾರ ಮಾಡಿದರು.

ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ ಸ್ವಾಮಿ, ರಹಮತ್ ಜಾನ್ ಬಾಬು, ಚಪ್ಪರದಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಕುಮಾರ್, ಉಪಾಧ್ಯಕ್ಷೆ ಸರಸ್ಪತಿ ಅರುಣ್, ಗ್ರಾಮದ ಯಜಮಾನರಾದ ಕಾಳೇಗೌಡ, ರಾಮೇಗೌಡ, ತಾಪಂ ಇಒ ಸುನೀಲ್ ಕುಮಾರ್, ಆಹಾರ ಇಲಾಖೆ ಶಿರಸ್ತೇದಾರ್ ಸಣ್ಣಸ್ವಾಮಿ, ನಿರೀಕ್ಷಕ ಮಂಜುನಾಥ್, ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್, ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಬಿಇಒ ಬಸವರಾಜು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಪ್ರಸಾದ್, ಲೋಕೋಪಯೋಗಿ ಇಲಾಖೆಯ ಜೆಇ ಕುಮಾರ್, ಕಂದಾಯ ನಿರೀಕ್ಷಕ ಆನಂದ್, ವೈದ್ಯಾಧಿಕಾರಿ ಡಾ.ಸಂದೀಪ್, ಪಿಡಿಒ ಶ್ರೀದೇವಿ ಇತರರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net