ನೌಕರರ ಸಂಘದ ಚುನಾವಣೆ ಇಂದು ತೀರ್ಪು?

highcourt
Published on

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣಾ ಪ್ರಕ್ರಿಯೆ, ಚುನಾವಣಾಧಿಕಾರಿ ನೇಮಕ ಹಾಗೂ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿದ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿ, ಹೈಕೋರ್ಟ್ ಗುರುವಾರ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

ಈ ವಿಚಾರವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಾಲಿ ಪದಾಧಿಕಾರಿಗಳು ಹಾಗೂ ಇತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಸುದೀರ್ಘ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಗುರುವಾರ ಆದೇಶ ನೀಡುವುದಾಗಿ ಹೇಳಿ ವಿಚಾರಣೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net