

Jharkhand: ಭದ್ರತಾ ಪಡೆಗಳು ನಡೆಸಿದ ಕಾಯಾಚರಣೆಯಲ್ಲಿ ಇಬ್ಬರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದ್ದು, ಒಬ್ಬ ಸಿಆರ್‌ಪಿಎಫ್ ಯೋಧ ಹುತಾತ್ಮರಾದ ಘಟನೆ ಜಾರ್ಖಂಡ್‌ನ ಬೊಕಾರೊ ಜಿಲ್ಲೆಯ ಬಿರ್ಹೋರ್ಡೆರಾ ಪ್ರದೇಶದ ಬಳಿ ಬುಧವಾರ (ಜು.16) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೊಕಾರೊದಲ್ಲಿ ಬಂಡುಕೋರರ ವಿರುದ್ಧ ಕಾರ್ಯಾಚರಣೆಯ ವೇಳೆ ಗುಂಡಿನ ಚಕಮಕಿ ನಡೆದಾಗ, ಅದರಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮನಾಗಿದ್ದಾನೆ. ಜೊತೆಗೆ ಇಬ್ಬರು ಇಬ್ಬರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಿರ್ಹೋರ್ಡೆರಾ ಅರಣ್ಯ ಪ್ರದೇಶದಲ್ಲಿ ದುಷ್ಕರ್ಮಿಗಳು ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಆರಂಭಿಸಿದ ನಂತರ ಈ ಎನ್‌ಕೌಂಟರ್ ನಡೆದಿದೆ.
ಕಾರ್ಯಾಚರಣೆಯಲ್ಲಿ ಕೋಬ್ರಾ 209 ಬೆಟಾಲಿಯನ್‌ನ ಗಾಯಗೊಂಡ ಜವಾನ ತೀವ್ರವಾಗಿ ಗಾಯಗೊಂಡು ನಂತರ ಚಿಕಿತ್ಸೆಗಾಗಿ ಸ್ಥಳಾಂತರಿಸುವಾಗ ಸಾವನ್ನಪ್ಪಿದರು. ಇತರ ಶಂಕಿತ ನಕ್ಸಲರ ಪತ್ತೆಗಾಗಿ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್)