ಅನಂತನಾಗ್​ನಲ್ಲಿ ಎನ್​ಕೌಂಟರ್​: ಮೂವರು ಉಗ್ರರ ಹತ್ಯೆ

Jammu 15 Jan 20
Published on

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರನಿಗ್ರಹ ಕಾರ್ಯಾಚರಣೆ ಮುಂದುವರಿದಿದೆ. ಸೋಮವಾರ ನಸುಕಿನಲ್ಲಿ ಅನಂತನಾಗ್​ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರು ಮುಖಾಮುಖಿಯಾಗಿದ್ದು, ಎನ್​ಕೌಂಟರ್ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದಕ್ಷಿಣ ಕಾಶ್ಮೀರದ ಈ ಜಿಲ್ಲೆಯ ಕೌಲ್​ ಚೋಹರ್​ ಎಂಬಲ್ಲಿ ಭದ್ರತಾ ಪಡೆ ಸಿಬ್ಬಂದಿ ಕಟ್ಟುನಿಟ್ಟಿನ ಶೋಧ ಕಾರ್ಯ ಆರಂಭಿಸಿದ್ದರು. ಇದು ಉಗ್ರರ ಅಡಗುದಾಣಕ್ಕೆ ಸಮೀಪವೇ ಆಗಿದ್ದರಿಂದ ಅಲ್ಲಿಂದ ತಪ್ಪಿಸಿಕೊಳ್ಳುವ ಪ್ರಯತ್ನವನ್ನು ಉಗ್ರರು ಮಾಡಿದ್ದಾರೆ. ಆಗ ಎನ್​ಕೌಂಟರ್ ಸಂಭವಿಸಿದೆ. ಇದರಲ್ಲಿ ಮೂವರು ಉಗ್ರರು ಹತರಾಗಿದ್ದು, ಅವರ ಗುರುತು ವಿವರಗಳು ಇನ್ನಷ್ಟೇ ಲಭ್ಯವಾಗಬೇಕಾಗಿದೆ.

ಭದ್ರತಾ ಪಡೆಗಳಿಗೆ ಉಗ್ರರು ಅಲ್ಲಿರುವ ಖಚಿತ ಮಾಹಿತಿ ಸಿಕ್ಕಿದ ಕಾರಣವೇ ಕಟ್ಟುನಿಟ್ಟಿನ ಶೋಧ ಕಾರ್ಯವನ್ನು ಅವರು ಕೈಗೊಂಡಿದ್ದರು. ಉಗ್ರರು ಭದ್ರತಾ ಪಡೆ ಸಿಬ್ಬಂದಿ ಮೇಲೆ ಗುಂಡಿನ ದಾಳಿ ಶುರುಮಾಡಿದ ಕಾರಣ ಭದ್ರತಾಪಡೆಯವರು ಪ್ರತಿದಾಳಿ ನಡೆಸಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net