ಕ್ರೀಡೆಗೆ ಉತ್ತೇಜನ ನೀಡಿ

kdr sports
ವಾಲಿಬಾಲ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ದೊಡ್ಡಪಟ್ಟಣಗೆರೆ ಗ್ರಾಮದಲ್ಲಿ ವಿಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ಸನ್ಮಾನಿಸಿದರು. ನಾಗರತ್ನಮ್ಮ, ಲೋಕೇಶ್, ಎಸ್.ಎಸ್.ಧರಣೇಶ್, ಜಗದೀಶ್ ಮತ್ತಿತರಿದ್ದರು.
Published on

ಕಡೂರು: ವಿದ್ಯಾರ್ಥಿ ಜೀವನದಲ್ಲಿ ದೈಹಿಕ ಬೆಳವಣಿಗೆಗೆ ಕ್ರೀಡೆಗಳು ಸಹಕಾರಿಯಾಗಲಿವೆ ಎಂದು ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ಹೇಳಿದರು.

ಬಾಲಕಿಯರ ವಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ತಾಲೂಕಿನ ದೊಡ್ಡಪಟ್ಟಣಗೆರೆ ಸರ್ಕಾರಿ ಪ್ರೌಢಶಾಲಾ ವಿಭಾಗದ ಕ್ರೀಡಾಪಟುಗಳಿಗೆ ಶನಿವಾರ ಗೌರವಿಸಿ ಮಾತನಾಡಿ, ಗ್ರಾಮೀಣ ಮಕ್ಕಳಿಗೆ ಕ್ರೀಡೆಗಳಲ್ಲಿ ಹೆಚ್ಚಿನ ಉತ್ತೇಜನ ನೀಡಿದರೆ ಭವಿಷ್ಯದಲ್ಲಿ ಉತ್ತಮ ಕೀಡಾಪಟುಗಳಾಗಿ ಹೊರಹೊಮ್ಮಲಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮದ ಪ್ರೌಢಶಾಲಾ ವಿಭಾಗದ ಬಾಲಕಿಯರು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸ್ಪರ್ಧೆ ನೀಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ ಎಂದರು.
ಗ್ರಾಪಂ ಉಪಾಧ್ಯಕ್ಷೆ ನಾಗರತ್ನಮ್ಮ, ಲೋಕೇಶ್, ಜಗದೀಶ್, ವೆಂಕಟೇಶ್, ಅನು, ಮುಖ್ಯಶಿಕ್ಷಕ ಎಸ್.ಎಸ್.ಧರಣೇಶ್, ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net