ಸರ್ಕಾರಿ ಜಮೀನು ಒತ್ತುವರಿ ಸರ್ಕಾರಕ್ಕೆ ನೋಟಿಸ್

highcourt
Published on

ಬೆಂಗಳೂರು: ಬೆಳ್ತಂಗಡಿ ತಾಲೂಕು ಕಾಣಿಯೂರು ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ (ರಿ) ವತಿಯಿಂದ ಅನಧಿಕೃತ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಮಂಗಳೂರು ಜಿಲ್ಲಾಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಈ ವಿಚಾರವಾಗಿ ತೆಂಕಕಾರಂದೂರು ಗ್ರಾಮದ ನಿವಾಸಿ ಅಶೋಕ್ ಆಚಾರ್ಯ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು.

ವಾದ - ಪ್ರತಿವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಮಂಗಳೂರು ಜಿಲ್ಲಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ, ಬೆಳ್ತಂಗಡಿ ತಹಶೀಲ್ದಾರ್ ಸೇರಿದಂತೆ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ,ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಅ.21ಕ್ಕೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net