ತರಳಬಾಳು ತಾಂತ್ರಿಕ ವಿದ್ಯಾಲಯದ ಬಿ.ಇ. ಫಲಿತಾಂಶ ಉತ್ತಮ

2019-12-11
Published on

ರಾಣೆಬೆನ್ನೂರ: ಇಲ್ಲಿಯ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದ 3ನೇ ವರ್ಷದ ಬಿ.ಇ. ಫಲಿತಾಂಶ ಪ್ರಕಟವಾಗಿದ್ದು ಉತ್ತಮ ಫಲಿತಾಂಶ ಬಂದಿದೆ.
ಮೆಕ್ಯಾನಿಕಲ್ ವಿಭಾಗದಲ್ಲಿ ಶೇ. 100ರಷ್ಟು, ಸಿವಿಲ್ ವಿಭಾಗದಲ್ಲಿ ಶೇ. 90, ಇನ್ಫರ್ಮೇಷನ್ ಸೈನ್ಸ್ ವಿಭಾಗದಲ್ಲಿ ಶೇ. 86, ಕಂಪ್ಯೂಟರ್ ಸೈನ್ಸ್‌ನಲ್ಲಿ ಶೇ. 76, ಎಲೆಕ್ಟ್ರಿಕಲ್ ಶೇ. 71 ಹಾಗೂ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಶೇ. 57ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಶಿವಕುಮಾರ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net