ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ವಿಶ್ವ ಬಾಹ್ಯಾಕಾಶ ದಿನ ಆಚರಣೆ ಅ. 5ರಂದು

2019-12-11
Published on

ರಾಣೆಬೆನ್ನೂರ: ಇಲ್ಲಿಯ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅ. 5ರಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಇಸ್ರೋ ಮತ್ತು ಯು.ಆರ್. ರಾವ್ ಸೆಟಲೈಟ್ ಸೆಂಟರ್ ವತಿಯಿಂದ ವಿಶ್ವ ಬಾಹ್ಯಾಕಾಶ ದಿನ ಆಚರಿಸಲಾಗುವುದು.
ಕಾರ್ಯಕ್ರಮದ ನಿಮಿತ್ತ ಅಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆವರೆಗೆ ವಿದ್ಯಾರ್ಥಿ ಹಾಗೂ ಸಾರ್ವಜನಿಕರಿಗೆ ಮುಕ್ತವಾಗಿ ಉಪಗ್ರಹ, ಉಡಾವಣೆ ವಾಹನ ಮಾದರಿಗಳು, ಪೋಸ್ಟರ್ ಮತ್ತು ವೀಡಿಯೊಗಳನ್ನು ವೀಕ್ಷಿಸಲು ಉಚಿತ ಪ್ರದರ್ಶನವಿರುತ್ತದೆ. ಅಲ್ಲದೆ ಜಿಲ್ಲೆಯ ವಿವಿಧ ಶಾಲೆ, ಕಾಲೇಜ್‌ನ ವಿದ್ಯಾರ್ಥಿಗಳಿಗಾಗಿ ಕ್ವಿಜ್, ಪಿಕ್ ಆ್ಯಂಡ್ ಸ್ಪೀಕ್ ಸೇರಿ ಇತರ ಸ್ಪರ್ಧೆ ಜರುಗಲಿವೆ.
ವಿಜೇತ ಸ್ಪರ್ಧಿಗಳಿಗೆ ಇಸ್ರೋ ವತಿಯಿಂದ ಪ್ರಶಸ್ತಿ ಪತ್ರ ವಿತರಿಸಲಾಗುವುದು. ಇಸ್ರೋದ ವಿಜ್ಞಾನಿಗಳಾದ ವಿ. ರಮೇಶ ನಾಯ್ಡು, ಡಾ. ರಾಘವೇಂದ್ರ ಕುಲಕರ್ಣಿ, ಆಡಳಿತ ಮಂಡಳಿ ಸದಸ್ಯ ಬಿ.ಎಸ್. ಸಣ್ಣಗೌಡ ಪಾಲ್ಗೊಳ್ಳುವರು ಎಂದು ವಿದ್ಯಾಲಯದ ಪ್ರಾಚಾರ್ಯ ಡಾ. ಶಿವಕುಮಾರ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net