

ಬೆಂಗಳೂರು: ರಾಜಧಾನಿಯಲ್ಲಿ ಈದ್ ಮಿಲಾದ್ ಪ್ರಯುಕ್ತ ಮುಸ್ಲಿಮರು ಮೆರವಣಿಗೆ ನಡೆಸುವುದರಿಂದ ಸೋಮವಾರ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಸಂಚಾರ ಪೊಲೀಸರು ಆದೇಶಿಸಿದ್ದಾರೆ.
ನಗರದ ಕೇಂದ್ರ ಭಾಗದಲ್ಲಿ ಉಂಟಾಗುವ ಸಂಚಾರ ದಟ್ಟಣೆಯನ್ನು ಸುಗಮಗೊಳಿಸುವ ಸಲುವಾಗಿ ಕನಕಪುರ ರಸ್ತೆ, ಸರ್ಜಾಪುರ ರಸ್ತೆ ಮತ್ತು ಹೊಸೂರು ರಸ್ತೆಗಳ ಮುಖಾಂತರ ನಗರದೊಳಗೆ ಭಾರೀ ವಾಹನಗಳು ಬೆಳಗ್ಗೆ 7ರಿಂದ ರಾತ್ರಿ 12 ಗಂಟೆ ವರೆಗೂ ನಿರ್ಬಂಧಿಸಲಾಗಿದೆ.
ಈ ಮೊದಲು ಬೆಳಗ್ಗೆ ಮತ್ತು ಸಂಜೆ ಪೀಕ್ ಅವರ್‌ನಲ್ಲಿ ಮಾತ್ರ ಭಾರೀ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಲಾಗಿತ್ತು. ಆದರೆ, ಇದೀಗ ಇಡೀ ದಿನ ನಿಷೇಧ ವಿಧಿಸಿರುವುದು ವಿಶೇಷವಾಗಿದೆ.