ವಿಶ್ವ ಪರಿಸರ ದಿನ ಆಚರಣೆ

Published on

ಬೆಂಗಳೂರು:
ಸುಂಕದಕಟ್ಟೆಯ ಅಂಜಲಿ ಕಾನ್ವೆಂಟ್ ಮತ್ತು ನೈಟಿಂಗೇಲ್ ಪ್ರೌಢಶಾಲೆಯ ವತಿಯಿಂದ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಎಂ.ಎಸ್. ಸರಳ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಂಶುಪಾಲರಾದ ಡಾ. ಬಿ. ಕೃಷ್ಣೇಗೌಡರು ಅಧ್ಯಕ್ಷತೆ ವಹಿಸಿ, ಪರಿಸರ ದಿನದ ಇತಿಹಾಸ ಹಾಗೂ ಮಹತ್ವವನ್ನು ಕುರಿತು ಮಾತನಾಡಿದರು. ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಿದರು. ಅಲ್ಲದೆ
ಸುಮಾರು 2 ಕಿ.ಮೀ ದೂರದವರೆಗೆ ಮಕ್ಕಳು ಹಾಗೂ ಶಿಕ್ಷಕರು ವಿವಿಧ ಪ್ರಾತ್ಯಕ್ಷಿಕೆಗಳ ಮೂಲಕ ಜಾಗೃತಿ ನಡಿಗೆ ಮಾಡಿ ಪೋಷಕರು ಹಾಗೂ ನಾಗರೀಕರಲ್ಲಿ ಪರಿಸರದ ಕಾಳಜಿಯ ಬಗ್ಗೆ ಅರಿವು ಮೂಡಿಸಿದರು.
ಇದೇ ಸಂದರ್ಭದಲ್ಲಿ 2023-24ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ 13ನೇ ಬಾರಿಗೆ ಶೇ.100 ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಇದಕ್ಕೆ ಕಾರಣರಾದ ಶಿಕ್ಷಕ ವೃಂದಕ್ಕೆ
ಅಭಿನಂದನೆಗಳನ್ನು ಸಲ್ಲಿಸಲಾಯಿತು. ಕೆಲ ವಿದ್ಯಾರ್ಥಿಗಳು ಪರಿಸರದ ಬಗ್ಗೆ ಭಾಷಣವನ್ನು ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net