

ರಾಣೆಬೆನ್ನೂರ: ಪರಿಸರ ಕಾಳಜಿ ಎಷ್ಟು ವಹಿಸುತ್ತೆಯೋ ಅಷ್ಟೇ ನಾವು ನೆಮ್ಮದಿಯಿಂದ ಬದುಕಲು ಸಾಧ್ಯ. ಪರಿಸರ ಬಗ್ಗೆ ನಾವು ಕಾಳಜಿವಹಿಸದೆ ಹೋದಾಗ ನಮ್ಮ ಜೀವನದ ಅಧೋಗತಿಗೆ ನಾವೇ ಕಾರಣರಾಗುತ್ತೇವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಶಿವರಾಯ ಪ್ರಭು ಹೇಳಿದರು.
ತಾಲೂಕಿನ ಅರೇಮಲ್ಲಾಪುರ ಗ್ರಾಮದ ಗಣೇಶ ದೇವಸ್ಥಾನದ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬುಧವಾರ ಏರ್ಪಡಿಸಿದ್ದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲರೂ ಮನೆಯ ಸುತ್ತ ಮುತ್ತ ಹಾಗೂ ಹೊಲಗದ್ದೆಗಳ ಬಯಲು ಜಾಗೆಯಲ್ಲಿ ವಿವಿಧ ತಳಿಯ ಸಸಿಗಳನ್ನು ನೆಟ್ಟು ಅವುಗಳನ್ನು ಹೆಮ್ಮರವಾಗಿ ಬೆಳೆಯುವಂತೆ ನೋಡಿಕೊಳ್ಳಬೇಕು. ಅಂದಾಗ ಮಾತ್ರ ನಾವು ಪರಿಸರಕ್ಕೆ ಅಪಾರವಾದ ಕೊಡುಗೆ ನೀಡಿದಂತಾಗುತ್ತದೆ ಎಂದರು.
ಗ್ರಾಪಂ ಉಪಾಧ್ಯಕ್ಷೆ ಶೈಲಾ ಮಿಳ್ಳಿ, ಪ್ರಮುಖರಾದ ನಿಂಗರಾಜ ಮಾಕನೂರ, ದೇವರಾಜ, ರಮೇಶ, ಬೆಟ್ಟಪ್ಪ ಸೂರ್ವೆ ಮತ್ತಿತರರು ಉಪಸ್ಥಿತರಿದ್ದರು.