ದುಬೈ ಒಕ್ಕಲಿಗರ ಸಂಘದಿಂದ ಪರಿಸರ ತಜ್ಞ ಡಾ.ಆರ್.ಕೆ ನಾಯರ್‌ಗೆ ಸನ್ಮಾನ

okkaliga
Published on

ಬೆಂಗಳೂರು: ದುಬೈ ಒಕ್ಕಲಿಗರ ಸಂಘ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗ್ರೀನ್ ಹೀರೋ ಆಫ್ ಇಂಡಿಯಾ, ಫಾರೆಸ್ಟರ್ ಕ್ರಿಯೇಟರ್ಸ್‌ನ ಸಂಸ್ಥಾಪಕ ಪರಿಸರ ತಜ್ಞ ಡಾ.ಆರ್.ಕೆ ನಾಯರ್‌ಗೆ ಸನ್ಮಾನಿಸಲಾಯಿತು.
ಈ ವೇಳೆ ಮಾತನಾಡಿದ ಅವರು ದುಬೈನಂತಹ ಮರುಭೂಮಿಯ ನಾಡಿನಲ್ಲಿ ಕಾಡು ಬೆಳೆಸಲು ಸಾಧ್ಯ ಎಂಬ ಸಂದೇಶ ವಿಶ್ವಕ್ಕೆ ನೀಡೋಣ ಎಂದು ಕರೆ ನೀಡಿದರು.
'ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ತಾಯ್ನೆಲದ ಪರ ನಮ್ಮ ಜವಾಬ್ದಾರಿಗಳು' ಎಂಬ ಧ್ಯೇಯೋದ್ದೇಶದೊಂದಿಗೆ ಒಕ್ಕಲಿಗರ ಸಂಘ ದುಬೈ ಯುಎಇ ಹಮ್ಮಿಕೊಂಡಿರುವ 'ವಿಶ್ವ ಪರಿಸರ ದಿನಾಚರಣೆ' ನಿಜಕ್ಕೂ ಶ್ಲಾಘನೀಯ ಎಂದರು.
ಆಯೋಜಕ ಸಂಘಟನೆ ಅಧ್ಯಕ್ಷ ಕಿರಣ್ ಗೌಡ ಚನ್ನರಾಯಪಟ್ಟಣ ‌ಮಾತನಾಡಿ, ಡಾ.ಆರ್ ಕೆ ನಾಯರ್ ಮಾರ್ಗದರ್ಶನದಲ್ಲಿ ಒಕ್ಕಲಿಗರ ಸಂಘ ಭಾರತದಲ್ಲಿ ಹಾಗೂ ದುಬೈನಲ್ಲೂ ಅರಣ್ಯ ನಿರ್ಮಿಸಲು ಕೈಜೋಡಿಸಲಿದೆ, ಇನ್ನಷ್ಟು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ ಎಂದು ಹೇಳಿದರು.
ಮೇಜರ್ ಜನರಲ್ ಒಮರ್ ಮಹಮ್ಮದ್ ಅಲ್ ಮರ್ಝೂಕಿ, ಶಿಕ್ಷಣ ತಜ್ಞ ರಮೇಶ್ ಡ್ಯಾಫೊಡೀಲ್ ಹಾಗೂ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಗಿಡಗಳನ್ನು ಸ್ವೀಕರಿಸಿ ಆರೈಕೆ ಮಾಡುವ ಜವಾಬ್ದಾರಿಯೊಂದಿಗೆ ಪರಿಸರ ಸಂರಕ್ಷಣೆ ಜಾಗೃತಿ ಮೂಡಿಸುವ ಸಂಕಲ್ಪ ಮಾಡಿದರು. ಹರೀಶ್ ಗೌಡ, ಶಿವಪ್ರಕಾಶ್ ಗೌಡ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net