ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲಿನ್ಯ

rotary
ರೋಟರಿ ಶಿವಮೊಗ್ಗ ಪೂರ್ವದಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ. ಎಚ್.ವಿ.ಅನಿಲ್‌ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಜಿ.ವಿಜಯಕುಮಾರ್, ಸತೀಶ್‌ಚಂದ್ರ, ಎಚ್.ಬಿ.ಆದಿಮೂರ್ತಿ, ವಸಂತ ಹೋಬಳಿದಾರ್, ಡಾ. ಪರಮೇಶ್ವರ ಶಿಗ್ಗಾವ್, ಸಂತೋಷ್, ಡಾ. ಲಲಿತಾ ಭರತ್ ಇದ್ದರು.
Published on

ಶಿವಮೊಗ್ಗ: ಮರ, ಗಿಡಗಳನ್ನು ನಾಶ ಮಾಡುತ್ತಿರುವುದರಿಂದ ಪ್ರಕೃತಿ ಸಮತೋಲನ ಕಳೆದುಕೊಳ್ಳುತ್ತಿದೆ ಎಂದು ಡಿವಿಎಸ್ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಎಚ್.ವಿ.ಅನಿಲ್‌ಕುಮಾರ್ ಆತಂಕ ವ್ಯಕ್ತಪಡಿಸಿದರು.

ರೋಟರಿ ಶಿವಮೊಗ್ಗ ಪೂರ್ವದಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪರಿಸರ ವಿನಾಸದಿಂದ ಆಗುವ ದುಷ್ಪರಿಣಾಮ ಕುರಿತು ಮಾತನಾಡಿ, ಆಧುನೀಕರಣದಿಂದ ಗಿಡಗಳನ್ನು ಬೆಳೆಸಲು ಸ್ಥಳವೇ ಇಲ್ಲದಂತಾಗಿದೆ. ಪ್ರಕೃತಿಯಿಂದ ಸಂಪೂರ್ಣ ಲಾಭ ಪಡೆದು ಬಳಿಕ ಪ್ರಕೃತಿಯನ್ನೇ ನಾಶ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ವಾತಾವರಣ ಹಾಳಾಗುತ್ತಿದೆ. ಪರಿಸರ ವಿನಾಶದಿಂದ ಮನುಷ್ಯನ ಜೀವಿತಾವಧಿ ಕಡಿಮೆಯಾಗುತ್ತಿದೆ. ಸುತ್ತಮುತ್ತಲಿನ ಪರಿಸರವನ್ನು ಚೆನ್ನಾಗಿ ಇಟ್ಟುಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದರು.
ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷ ಸತೀಶ್‌ಚಂದ್ರ ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸಬೇಕು. ಪರಿಸರ ದಿನದ ಆಶಯವನ್ನು ವರ್ಷಪೂರ್ತಿ ಜಾರಿಗೆ ತರಬೇಕು ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಪ್ರಮುಖರಾದ ವಸಂತ ಹೋಬಳಿದಾರ್, ಎಚ್.ಬಿ.ಆದಿಮೂರ್ತಿ, ಡಾ. ಪರಮೇಶ್ವರ್ ಶಿಗ್ಗಾವ್, ಅರುಣ್ ದೀಕ್ಷಿತ್, ಡಾ. ಲಲಿತಾ ಭರತ್, ಸಂತೋಷ್, ಎನ್.ಎಚ್.ಶ್ರೀಕಾಂತ್, ಎಸ್.ಗಣೇಶ್, ಶಶಿಕಾಂತ್ ನಾಡಿಗ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net