ಸಚಿವರ ಆಘಾತ

Qute Eshwar khandre
Published on

ಬೆಂಗಳೂರು: ಬೀದರ್‌ನ ಭಾರತೀಯ ಸ್ಟೇಟ್ ಬ್ಯಾಂಕ್ ಬಳಿ ಹಾಡು ಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಇಬ್ಬರು ಸಿಬ್ಬಂದಿಯನ್ನು ಕೊಂದು ಹಣ ದರೋಡೆ ಮಾಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಆರೋಪಿಗಳ ಬಂಧನಕ್ಕೆ ತುರ್ತು ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿರುವುದು ತೀವ್ರ ನೋವಿನ ಸಂಗತಿ. ಈ ಸಂದರ್ಭದಲ್ಲಿ ಸರ್ಕಾರ ಕುಟುಂಬದ ಜತೆ ನಿಲ್ಲುತ್ತದೆ ಎಂದು ತಿಳಿಸಿದರು.

ವಿಷಯ ತಿಳಿದ ಕೂಡಲೇ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರೊಂದಿಗೆ ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ತಾವು ಮಾತನಾಡಿದ್ದು, ದುಷ್ಕರ್ಮಿಗಳ ಬಂಧನಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಮತ್ತು ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ಬಾರದಂತೆ ಕ್ರಮ ವಹಿಸಲು ಸೂಚಿಸಿರುವುದಾಗಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net