ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ: 10 ಲಕ್ಷ ರೂ. ಪರಿಹಾರ, ಕುಟುಂಬಸ್ಥರಿಗೆ ನ್ಯಾಯ ಕೊಡಿಸುವ ಭರವಸೆ ಕೊಟ್ಟ ಸಚಿವ | Sachin Panchal

ವಿಜಯವಾಣಿ (15)
Published on

ಬೀದರ್: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಕೊಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಹಾಗೂ ಕುಟುಂಬದ ಸದಸ್ಯರಿಗೆ 10 ಲಕ್ಷ ರೂ. ಪರಿಹಾರ ಕೊಡಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಭಾಲ್ಕಿ ತಾಲೂಕು ಕಟ್ಟಿತೂಗಾಂವದಲ್ಲಿರುವ ಸಚಿನ್ ಪಾಂಚಾಳ ನಿವಾಸಕ್ಕಿಂದು ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರ ಹಾಗೂ ಖಾಸಗಿ ನೆರವಿನಿಂದ ಒಟ್ಟು 10 ಲಕ್ಷ ಪರಿಹಾರ ಘೋಷಿಸಿ. ಈ ನೋವಿನ ಸಂದರ್ಭದಲ್ಲಿ ತಾವೂ ಹಾಗೂ ಸರ್ಕಾರ, ಸಚಿನ್ ಕುಟುಂಬದ ಜತೆ ನಿಲ್ಲುವುದಾಗಿ ಭರವಸೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, "ಪ್ರತಿಯೊಂದು ಜೀವವೂ ಅಮೂಲ್ಯ, ಸಚಿನ್ ಪಾಂಚಾಳ ಸಾವು ತೀವ್ರ ನೋವು ತಂದಿದೆ. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು. ಬಿಜೆಪಿ ಸಾವಿನಲ್ಲೂ ರಾಜಕೀಯ ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ" ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net