ವಿಜಯಪುರ, ಶಿವಮೊಗ್ಗದಲ್ಲಿ ಫುಡ್ ಪಾರ್ಕ್ ಸ್ಥಾಪನೆ: ಸಚಿವ ಚಲುವರಾಯಸ್ವಾಮಿ ಸೂಚನೆ

Agri minister meeting
Published on

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ೋಷಿರುವಂತೆ ವಿಜಯಪುರ ಹಾಗೂ ಶಿವಮೊಗ್ಗದಲ್ಲಿ ಆಹಾರ ಉದ್ಯಾನ (ಫುಡ್ ಪಾರ್ಕ್)ಗಳನ್ನು ಪ್ರಾರಂಭಿಸಲು ಕ್ರಮಕೈಗೊಳ್ಳಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸೂಚಿಸಿದ್ದಾರೆ.

ವಿಕಾಸಸೌಧದ ಸಭಾ ಕೊಠಡಿಯಲ್ಲಿ ಆಹಾರ ಕರ್ನಾಟಕ ನಿಯಮಿತದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆವಹಿಸಿ ಸೋಮವಾರ ಮಾತನಾಡಿದ ಅವರು, ಫುಡ್ ಪಾರ್ಕ್ ಸ್ಥಾಪನೆ ಸಂಬಂಧ ಆರ್ಥಿಕ ಇಲಾಖೆಗೆ ವಿಸ್ತೃತ ಯೋಜನಾ ವರದಿ ಸಲ್ಲಿಸಿ ಅನುಮೋದನೆ ಪಡೆಯಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಫುಡ್ ಪಾರ್ಕ್‌ಗಳು ಗ್ರಾಹಕರ ಆಕರ್ಷಣೆ ಕೇಂದ್ರವಾಗುವ ಜತೆಗೆ ಪರೋಕ್ಷವಾಗಿ ಆಹಾರಧಾನ್ಯ ಬೆಳೆಯುವ ರೈತರಿಗೂ ನೆರವಾಗುತ್ತವೆ. ಆಹಾರ ಉತ್ಪನ್ನಗಳ ಸಂಸ್ಕರಣ ಘಟಕಗಳನ್ನು ಹೆಚ್ಚಿಸಿ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಖಾತರಿ ರೈತರಿಗೆ ಇನ್ನಷ್ಟು ಅನುಕೂಲ ಮಾಡಿಕೊಡಬೇಕು ಎಂದು ಎನ್.ಚಲುವರಾಯಸ್ವಾಮಿ ಸಲಹೆ ನೀಡಿದರು.

ಈ ಸಭೆಯಲ್ಲಿ ಕೃಷಿ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್, ಆಹಾರ ಸಂಸ್ಕರಣೆ ಮತ್ತು ಕಟಾವು ತಂತ್ರಜ್ಞಾನದ ವಿಶೇಷ ಅಧಿಕಾರಿ ರೋಹಿಣಿ ಸಿಂಧೂರಿ, ಆಹಾರ ಕರ್ನಾಟಕ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ರ್ಇಾನ್, ಡಾ.ಜಿ.ಟಿ.ಪುತ್ರ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net