ಎತ್ತಿನಭುಜ ಚಾರಣಕ್ಕೆ ಸದ್ಯಕ್ಕಿಲ್ಲ ಅನುಮತಿ! ಕಾರಣ ಹೀಗಿದೆ

ವಿಜಯವಾಣಿ (2)
Published on

ಚಿಕ್ಕಮಗಳೂರು: ಕಾಫಿ ನಾಡಿನ ಮಲೆನಾಡು ಭಾಗದಲ್ಲಿ ಮುಂಗಾರು ಪೂರ್ವದಿಂದಲೂ ಮಳೆ ನಿರಂತರ ಸುರಿಯುತ್ತಲೇ ಇದೆ. ಹೀಗಾಗಿ ಪ್ರವಾಸಿಗರ ಸ್ವರ್ಗ ಎಂದೇ ಖ್ಯಾತಿ ಪಡೆದಿರುವ ಮೂಡಿಗೆರೆ ತಾಲೂಕು ಎತ್ತಿನ ಭುಜಕ್ಕೆ ಒಂದು ತಿಂಗಳು ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.

ಜು.31ರವರೆಗೆ ಎತ್ತಿನಭುಜಕ್ಕೆ ಪ್ರವಾಸಿಗರ ಭೇಟಿ ನಿರ್ಬಂಧಿಸಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮೂಡಿಗೆರೆ ವಲಯ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಹೀಗಾಗಿ ಭೂಕುಸಿತ ಉಂಟಾಗುವ ಸಾಧ್ಯತೆಯೂ ಇದೆ. ಎತ್ತಿನ ಭುಜ ಚಾರಣ ಪ್ರದೇಶದಲ್ಲಿ ಹೆಚ್ಚಿನ ಮಂಜು ಕವಿದ ವಾತಾವರಣ ಇರುವುದರಿಂದ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಒಂದು ತಿಂಗಳು ಚಾರಣ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net