ಕಾಂಗ್ರೆಸ್ ಶಕ್ತಿ ಏನು ಎಂಬುದು ಬಿಜೆಪಿಯವರಿಗೂ ಗೊತ್ತಿದೆ: DK Shivakumar

dk (18) (1)
Published on

ಬೆಳಗಾವಿ: ಕಾಂಗ್ರೆಸ್ ಪಕ್ಷದ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ನಮಗಿಂತ ಚನ್ನಾಗಿ ಬಿಜೆಪಿಯವರಿಗೂ ಗೊತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್(DK Shivakumar) ಹೇಳಿದರು.

ಇಲ್ಲಿನ ಸರ್ಕಿಟ್ ಹೌಸ್​ನಲ್ಲಿ ಮಂಗಳವಾರ ಸುದ್ದಿಗಾರರಲ್ಲಿ ಬಿಜೆಪಿಯ ಬೆಳಗಾವಿ ಚಲೋ ಬಗ್ಗೆ ಮಾತನಾಡಿದ ಡಿಕೆಶಿ, ಈಗ ಆ ಮಾತು ಏಕೆ. ಯಾರಾದರೂ ಕೆಡಿಸುವ ಪ್ರಯತ್ನ ಮಾಡಲಿ. ಕಾಂಗ್ರೆಸ್ ಪಕ್ಷದ ಶಕ್ತಿ ಅವರಿಗೂ ಗೊತ್ತಿದೆ. ನಮಗೂ ಗೊತ್ತಿದೆ. ಮೊದಲು ಐತಿಹಾಸಿಕ ಕಾರ್ಯಕ್ರಮ ಮಾಡುವ ಮೂಲಕ ಇತಿಹಾಸದ ಪುಟ ಸೇರೋಣ ಎಂದರು.

ಬೆಳಗಾವಿಯು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದೆ. ಹೀಗಾಗಿ ಬೆಳಗಾವಿಯಲ್ಲಿ ದೀಪಾಲಂಕಾರ ಮಾಡಲಾಗಿದ್ದು, ಸಾರ್ವಜನಿಕರು ಈ ವೈಭವವನ್ನು ಕಣ್ತುಂಬಿಕೊಳ್ಳಬೇಕು ಎಂದು ತಿಳಿಸಿದರು.

ಇದೇ 26ರಿಂದ ಅಧಿಕೃತ ಕಾರ್ಯಕ್ರಮ ಆರಂಭವಾಗಲಿದೆ. 26ರಂದು ಬೆಳಗ್ಗೆ ಕೆಲವು ಸ್ಥಳಗಳಲ್ಲಿ ಉದ್ಘಾಟನಾ ಕಾರ್ಯಕ್ರಮಗಳಿವೆ. 1924ರಲ್ಲಿ ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ ಡಿ. 26ರ ಮಧ್ಯಾಹ್ನ 3 ಗಂಟೆಗೆ ನಡೆದಿತ್ತು. 26ರಂದು ಅದೇ ಸಮಯಕ್ಕೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. 27ರಂದು ಬೆಳಗ್ಗೆ 10.30ಕ್ಕೆ ಸರ್ಕಾರದ ವತಿಯಿಂದ ಸುವರ್ಣಸೌಧ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು. ಅಂದು ಸುವರ್ಣ ಸೌಧದಲ್ಲಿ ಫೋಟೋ ಸೆಷನ್, ಭೋಜನ ಕೂಟವಿದೆ. 27ರಂದು ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದೆ ಎಂದು ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net