ಕಮಿಷನ್ ದಂಧೆ ಪ್ರತಿ ಶಾಸಕನಿಗೂ ಗೊತ್ತು

Kumaraswami
Published on

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮಿಷನ್ ದಂಧೆ ಬಗ್ಗೆ 224 ಶಾಸಕರಿಗೂ ಗೊತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ನಗರ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಶಾಸಕರ ಹಣೆಬರಹವೋ ಏನೋ, ತಮ್ಮ ಕ್ಷೇತ್ರಗಳಿಗೆ ಸರ್ಕಾರದ ಯಾವುದೇ ಕಾರ್ಯಕ್ರಮ ತೆಗೆದುಕೊಂಡು ಹೋಗಬೇಕಾದರೆ ಪೇಮೆಂಟ್ ಆಗಲೇಬೇಕು. ಈ ಸರ್ಕಾರದಲ್ಲಿ ಇದೇ ನಡೆಯುತ್ತಿರುವುದು ಎಂದು ಆರೋಪಿಸಿದರು.

ಈ ಮುಖ್ಯಮಂತ್ರಿಗೆ ಮರ್ಯಾದೆ ಇದೆಯಾ? ಇಂಥ ಭ್ರಷ್ಟ ಸಚಿವನನ್ನು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ. ಆ ವ್ಯಕ್ತಿಯನ್ನು ಇನ್ನೂ ಸಂಪುಟದಲ್ಲಿ ಇಟ್ಟುಕೊಂಡಿದ್ದಾರೆ. ಸರ್ಕಾರದಲ್ಲಿ ಭ್ರಷ್ಟಾಚಾರ, ಕಮಿಷನ್ ವ್ಯವಹಾರ ಅವ್ಯಾಹತವಾಗಿದೆ. ಅದಕ್ಕೆ ಕೊನೆಯೇ ಇಲ್ಲ. ಪ್ರತಿಯೊಬ್ಬ ಶಾಸಕರು ಸಮಸ್ಯೆ ಎದುರಿಸುತ್ತಿದ್ದಾರೆ. ವಸತಿ ಇಲಾಖೆಯ ಕರ್ಮಕಾಂಡದ ಬಗ್ಗೆ ಬೀದಿ ಬೀದಿಯಲ್ಲಿ ಚರ್ಚೆ ಆಗುತ್ತಿದೆ. ಇವೆಲ್ಲವನ್ನು ಇಲಾಖೆಗಳು ಅಂತಾರಾ? ಇವರೆಲ್ಲಾ ಮಂತ್ರಿಗಳಾ, ಈ ವ್ಯಕ್ತಿಯನ್ನು ಡಿಸಿಎಂ ಮಾಡಬೇಕಿತ್ತಂತೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇಷ್ಟು ದಿನ ಪೂಜೆ ಮಾಡುತ್ತಿದ್ದರಾ..?: ಗಣಿಗಾರಿಕೆ ಬಗ್ಗೆ ತನಿಖೆ ಮಾಡುವಂತೆ ಕಾನೂನು ಸಚಿವ ಎಚ್.ಕೆ.ಪಾಟೀಲ್ ಪತ್ರ ಬರೆದಿದ್ದಾರೆ. 2 ವರ್ಷದಿಂದ ಏನು ಮಾಡುತ್ತಿದ್ದರು ? 2015-16ರಲ್ಲಿ ತನಿಖೆ ನಡೆಸುವಂತೆ ಇವರೇ ಶಿಫಾರಸು ಮಾಡಿದ್ದರು. ಆ ವರದಿ ಇಟ್ಟುಕೊಂಡು ದಿನವೂ ಪೂಜೆ ಮಾಡುತ್ತಿದ್ದಾರಾ? ಎಂದು ಎಚ್ಡಿಕೆ ಖಾರವಾಗಿ ಪ್ರಶ್ನೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net