ಕರೊನಾ ಇಲ್ಲವಾದರೆ ಏನಂತೆ, ದಿನಕ್ಕೆ 100 ಮಾದರಿ ಲ್ಯಾಬ್​ಗೆ ಕಳುಹಿಸಿ; ಡಿಸಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚನೆ

state 4
Published on

ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಕರೊನಾ ಸೋಂಕು ಕಾಣಿಸಿಕೊಳ್ಳದ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶಿವಮೊಗ್ಗ, ಚಿತ್ರದುರ್ಗ, ಹಾಸನ, ಚಾಮರಾಜನಗರ, ಹಾವೇರಿ, ಕೋಲಾರ, ಯಾದಗಿರಿ, ಚಿಕ್ಕಮಗಳೂರು, ರಾಯಚೂರು, ರಾಮನಗರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿಲ್ಲ. ಆದರೂ, ಸೋಂಕು ಇಲ್ಲ ಎಂದು ನಿರ್ಲಕ್ಷ್ಯವಹಿಸದೆ ಯಾವುದೇ ವ್ಯಕ್ತಿಯಲ್ಲಿ ಜ್ವರ ಮತ್ತು ಉಸಿರಾಟದ ತೊಂದರೆಗೆ ಸಂಬಂಧಿಸಿದ ಕಾಯಿಲೆ ಕಾಣಿಸಿಕೊಂಡವರಿಂದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಬೇಕು.

ಏ. 17ರಿಂದ 19ರವರೆಗೆ ಪ್ರತಿದಿನ 100 ಮಾದರಿಗಳನ್ನು ಲ್ಯಾಬ್​ಗೆ ಕಳುಹಿಸಬೇಕು. ನಂತರದ ದಿನಗಳಲ್ಲಿ ತಲಾ 50 ಜನರ ಮಾದರಿ ಸಂಗ್ರಹಿಸಿ ಕಳುಹಿಸಲು ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net