ಸಾಮಾಜಿಕ ಕಾರ್ಯಗಳಿಗೆ ಪ್ರತಿಯೊಬ್ಬರೂ ಸಹಕಾರ ನೀಡಿ

1ckm8- lions
ಚಿಕ್ಕಮಗಳೂರಲ್ಲಿ ಏರ್ಪಡಿಸಿದ್ದ ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಜಿ.ರಮೇಶ್ ಉದ್ಘಾಟಿಸಿದರು. ಶಾಂತಾರಾಂ ಶೆಟ್ಟಿ, ಮುನೀರ್ ಅಹಮ್ಮದ್, ಬಾಲಕೃಷ್ಣ ಇದ್ದರು.
Published on

ಚಿಕ್ಕಮಗಳೂರು: ಸೇವೆ ಮತ್ತು ಸಾಂಗತ್ಯ ಲಯನ್ಸ್ ಸಂಸ್ಥೆ ಪ್ರಮುಖ ಉದ್ದೇಶವಾಗಿದ್ದು, ಸಾಮಾಜಿಕ ಕಾರ್ಯಗಳಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಜಿ.ರಮೇಶ್ ಹೇಳಿದರು.
ನಗರದ ಲಯನ್ಸ್ ಸೇವಾ ಭವನದಲ್ಲಿ ಗುರುವಾರ ಲಯನ್ಸ್ ಕ್ಲಬ್ ಶ್ರೀ ಜೈನ ಶ್ವೇತಾಂಬರ ತೇರಾಪಂಥ್ ಯುವಕ ಪರಿಷತ್ ಕಂಪಾನಿಯೋ ಸಂಸ್ಥೆ ಆಶ್ರಯದಲ್ಲಿ ಏರ್ಪಡಿಸಿದ್ದ ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಕಲ ಜೀವರಾಶಿಗಳಲ್ಲಿ ಸಂವೇದನಾ ಶೀಲತೆ ಮನೋಭಾವ ಸೇವೆ ಎನಿಸಿಕೊಳ್ಳುತ್ತದೆ. ಈ ದಿಸೆಯಲ್ಲಿ ಕಳೆದ 15 ದಿನಗಳಿಂದ ನಡೆಯುತ್ತಿರುವ ಫೂಟ್ ಪಲ್ಸ್ ಥೆರಪಿ ಶಿಬಿರವನ್ನು ಸಾರ್ವಜನಿಕರು ಸದುಪಯೊಗಪಡಿಸಿಕೊಳ್ಳಬೇಕು. ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ವರ್ಷದಲ್ಲಿ ಆರೋಗ್ಯ ತಪಾಸಣೆ, ನೇತ್ರ ಪರೀಕ್ಷೆ, ಪರಿಸರ ಸಂರಕ್ಷಣೆ ಹಾಗೂ ಯುವಜನರಿಗೆ ಉದ್ಯೋಗ ಕುರಿತು ಮಾಹಿತಿ ನೀಡುವ ಶಿಬಿರವನ್ನು ಲಯನ್ಸ್ ಸಂಸ್ಥೆ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಸೆ.21ಕ್ಕೆ ಲಯನ್ಸ್ ಸೇವಾ ಭವನದಲ್ಲಿ ಮಣಿಪಾಲದ ಕಸ್ತೂರಿಬಾ ಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗುವುದು. ಆರೊಗ್ಯ ತಪಾಸಣೆ ಜತೆಗೆ ಉಚಿತ ಔಷಧಿಗಳನ್ನು ವಿತರಿಸಲಾಗುವುದು ಎಂದು ಹೇಳಿದರು.
ಕಂಪಾನಿಯೋ ಸಂಸ್ಥೆ ಸಂಪನ್ಮೂಲ ವ್ಯಕ್ತಿ ಶಾಂತಾರಾಂ ಶೆಟ್ಟಿ ಮಾತನಾಡಿ, ಸೆ.6ರವರೆಗೆ ಲಯನ್ಸ್ ಸಂಸ್ಥೆ ಆಶ್ರಯದಲ್ಲಿ ಉಚಿತ ಫೂಟ್‌ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ಸಾವಿರಾರು ಜನ ಚಿಕಿತ್ಸೆ ಪಡೆದುಕೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಚಿಕ್ಕಮಗಳೂರು ಲಯನ್ಸ್ ಕ್ಲಬ್‌ನ ಸಂಸ್ಥಾಪಕ ಸದಸ್ಯ ಸೈಯ್ಯದ್ ಮುನೀರ್‌ಅಹಮ್ಮದ್, ಲಯನ್ಸ್ ಸೇವಾ ಟ್ರಸ್ಟ್‌ನ ಕಾರ್ಯದರ್ಶಿ ಪ್ರೋ . ಜಗದೀಶಪ್ಪ, ಖಜಾಂಚಿ ಬಾಲಕೃಷ್ಣ, ತೇರಾಪಂಥ್ ಸಭಾಧ್ಯಕ್ಷ ತಾರಾಚಂದ್, ತೇರಾಪಂಥ್ ಟ್ರಸ್ಟ್ ಅಧ್ಯಕ್ಷ ಅಶೋಕ್ ದೇಸಿ, ತೇರಾಪಂಥ್ ಯುವ ಪರಿಷತ್‌ನ ಅಧ್ಯಕ್ಷ ನಿತೀಶ್ ಜೈನ್, ಸದಸ್ಯರಾದ ಪುಷ್ಪರಾಜ್, ನವಿತಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net