ಬಾಗಲಕೋಟೆ ನಗರದಲ್ಲಿ ಮಾಜಿ ಶಾಸಕ, ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಅಽಕಾರಿಗಳಿಗೆ ಮಾಹಿತಿ ನೀಡಿದರು. ನಾಗರಾಜ ಕುಲಕರ್ಣೀ, ಬಿಎಲ್ ೧ ಮಲ್ಲು ಮುತ್ತಪ್ಪನವರ, ಬಿಎಲ್‌ಎ ೨ ಮಲ್ಲು ಕಾಂಬಳೆ, ಶರತ ಪಾಟೀಲ, ಸರಸ್ವತಿ ಕುರಬರ, ಮುತ್ತಣ್ಣ ಕುರಬರ ಇದ್ದರು.
ಬಾಗಲಕೋಟೆ: ಪ್ರತಿಯೊಬ್ಬರೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಿನ್ನಲೆಯಲ್ಲಿ ಮಂಗಳವಾರ ತಮ್ಮ ನಿವಾಸದಲ್ಲಿ ಬೂತ ಮಟ್ಟದ ಅಽಕಾರಿಗಳಿಗೆ ದಾಖಲೆ ಸಹಿತಿ ಮಾಹಿತಿ ಒದಗಿಸಿ ಮಾತನಾಡಿದ ಅವರು, ಮತಕ್ಷೇತ್ರದ ಪ್ರತಿಯೊಂದು ಮನೆಗೂ ಭೇಟಿ ನೀಡುವ ಬೂತ್ ಮಟ್ಟದ ಅಽಕಾರಿಗಳಿಗೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದರು.
ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ಇತರ ವಿವರಗಳು ನಿಖರವಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ನಮ್ಮ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಪ್ರಕ್ರಿಯೆ. ಪ್ರಜಾಪ್ರಭುತ್ವದ ಸುಭದ್ರ ಅಡಿಪಾಯ ಮತದಾನವಾಗಿದ್ದು, ಮತದಾನದ ಹಕ್ಕು ಚಲಾಯಿಸಲು ಮತದಾರರ ಪಟ್ಟಿಯಲ್ಲಿ ಹೆಸರು ಇರುವುದು ಅತ್ಯಗತ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಅಽಕಾರಿಗಳಾದ ನಾಗರಾಜ ಕುಲಕರ್ಣೀ, ಬಿಎಲ್ ೧ ಮಲ್ಲು ಮುತ್ತಪ್ಪನವರ, ಬಿಎಲ್‌ಎ ೨ ಮಲ್ಲು ಕಾಂಬಳೆ, ಶರತ ಪಾಟೀಲ, ಸರಸ್ವತಿ ಕುರಬರ, ಮುತ್ತಣ್ಣ ಕುರಬರ, ಶರತ ಪಾಟೀಲ ಸೇರಿದಂತೆ ಇತರರು ಇದ್ದರು.