ಬೆಂಕಿ ನಂದಿಸುವ ವಿಧಾನ ಪ್ರತಿಯೊಬ್ಬರೂ ತಿಳಿದುಕೊಳ್ಳಿ

03 HANUR 4
ಹನೂರಿನಲ್ಲಿ ಅಗ್ನಿಶಾಮಕ ಸಿಬ್ಬಂದಿಯಿಂದ ಗೃಹರಕ್ಷಕ ಸಿಬ್ಬಂದಿಗೆ ಬೆಂಕಿ ನಂದಿಸುವ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಅರಿವು ಮೂಡಿಸಲಾಯಿತು. ಮಹೇಶ್, ಲಿಂಗೇಶ್, ಬಸವರಾಜು, ರಮೇಶ್ ಇತರರು ಇದ್ದರು.
Published on

ಹನೂರು: ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದಲ್ಲಿ ಬೆಂಕಿ ನಂದಿಸುವ ವಿಧಾನವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಅಗ್ನಿಶಾಮಕ ಪ್ರಭಾರ ಠಾಣಾಧಿಕಾರಿ ಮಹೇಶ್ ತಿಳಿಸಿದರು.

ಪಟ್ಟಣದ ಬಿಎಂಜಿ ಪ್ರೌಢಶಾಲೆಯ ಆವರಣದಲ್ಲಿ ಭಾನುವಾರ ಗೃಹರಕ್ಷಕ ಸಿಬ್ಬಂದಿಗೆ ಅಗ್ನಿ ಸುರಕ್ಷತೆಯ ಬಗ್ಗೆ ಆಯೋಜಿಸಿದ್ಧ ಜಾಗೃತಿ ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆ ನೀಡಿ ಮಾತನಾಡಿದರು.

ಮನೆ ಹಾಗೂ ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ಕೆಲವು ಕಾರಣದಿಂದ ಅಗ್ನಿ ಅವಘಡ ಸಂಭವಿಸುತ್ತವೆ. ಇದರಿಂದ ವಸ್ತುಗಳ ನಾಶವಾಗುವುದಲ್ಲದೆ ಪ್ರಾಣ ಹಾನಿ ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತಿದೆ. ಕೆಲವೊಂದು ಸಂದರ್ಭದಲ್ಲಿ ಇತರರಿಗೂ ಹಾನಿಯಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಬೆಂಕಿ ಅನಾಹುತ ಸಂಭವಿಸದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಮನೆಗಳಲ್ಲಿ ಗ್ಯಾಸ್ ಸಿಲಿಂಡರ್ ಬಗ್ಗೆ ನಿಗಾ ವಹಿಸಬೇಕು. ಒಂದು ವೇಳೆ ಗ್ಯಾಸ್ ಹೊತ್ತಿಕೊಂಡಲ್ಲಿ ಗಾಬರಿಯಾಗುವ ಬದಲು ಆರಿಸುವ ವಿಧಾನವನ್ನು ತಿಳಿದುಕೊಳ್ಳಬೇಕು. ಮೊದಲು ಜೀವ ರಕ್ಷಣೆಗೆ ಆದ್ಯತೆ ನೀಡಿ ನಂತರ ವಸ್ತುಗಳ ರಕ್ಷಣೆಗೆ ಮುಂದಾಗಬೇಕು. ಈ ಬಗ್ಗೆ ಪ್ರತಿಯೊಬ್ಬರೂ ಜಾಗೃತಿಯನ್ನು ಹೊಂದಬೇಕು. ಜತೆಗೆ ಕಾರ್ಯನಿರ್ವಹಿಸುವ ಸ್ಥಳದಲ್ಲಿ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಬೇಕು. ಅಗ್ನಿ ಅವಘಡ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದರು. ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಲಿಂಗೇಶ್, ಬಸವರಾಜು, ಮನೋಹರ್, ಗೃಹರಕ್ಷಕ ಘಟಕ ಅಧಿಕಾರಿ ರಮೇಶ್ ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net