

ಬೈಲಕುಪ್ಪೆ: ಹುಲಿ ಸಂರಕ್ಷಣೆಗೆ ಎಲ್ಲರ ಸಹಕಾರ ಅವಶ್ಯಕ ಎಂದು ತಾಲೂಕು ರೋಟರಿ ಮಿಡ್‌ಟೌನ್ ಅಧ್ಯಕ್ಷ ಎಂ.ಎಂ. ರಾಜೇಗೌಡ ಹೇಳಿದರು.
ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಸಮೀಪದಲ್ಲಿರುವ ಸಾಲುಮರದ ತಿಮ್ಮಕ್ಕ ವೃಕ್ಷೋಧ್ಯಾನ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಹುಲಿ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಪ್ರತಿಯೊಬ್ಬರೂ ಅರಣ್ಯ ರಕ್ಷಣೆಗೆ ಒತ್ತು ನೀಡುವ ಮೂಲಕ ಕಾಡು ಪ್ರಾಣಿಗಳ ರಕ್ಷಣೆಗೆ ಸಹಕಾರ ನೀಡಬೇಕು. ಅರಣ್ಯದ ಮೇಲೆ ಮನುಷ್ಯನ ಹಸ್ತಕ್ಷೇಪ ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಾಣಿಗಳು ನಾಡಿನತ್ತ ಬರುತ್ತಿವೆ. ಸರ್ಕಾರ ಈ ಬಗ್ಗೆ ವೈಜ್ಞಾನಿಕ ಕ್ರಮವಹಿಸಬೇಕು. ಅಲ್ಲದೆ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸಗಳಾಗಬೇಕು ಎಂದರು. ಕಾರ್ಯಕ್ರಮದ ಅಂಗವಾಗಿ ಸಸಿ ನೆಡಲಾಯಿತು.
ಅರಣ್ಯ ಇಲಾಖೆ ಸಿಬ್ಬಂದಿ ಕೆ.ಪಿ. ಸ್ವಾಮಿ, ಅಶೋಕ್, ಶಿವಯ್ಯ, ರೋಟರಿ ಸಂಸ್ಥೆಯ ಕಾರ್ಯದರ್ಶಿ ಐ.ಕೆ.ಪಿ. ಹೆಗಡೆ, ಸದಸ್ಯ ಬಸವೇಗೌಡ, ಎಂ.ಪಿ.ರಾಜು, ಪ್ರಕಾಶ್, ಮೋಹನ್, ಹರೀಶ್, ಲೋಕಪಾಲಯ್ಯ ಇತರರು ಇದ್ದರು.