ಭಾಷೆಗೆ ಪ್ರತಿಯೊಬ್ಬರ ಆದ್ಯತೆ ಮುಖ್ಯ

srb chandragutti
ಸೊರಬ ಚಂದ್ರಗುತ್ತಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಸಮಿತಿಯಿಂದ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಗಣೇಶ್ ಮರಡಿ, ಗೋಪಾಲ್ ಪೂಜಾರಿ, ಕೃಷ್ಣಮೂರ್ತಿ ಓಲೇಕರ್, ಪರಮೇಶ್, ಆನಂದ, ಗಣೇಶ್ ಇತರರಿದ್ದರು.
Published on

ಸೊರಬ: ಸುಂದರ ಲಿಪಿ ಹೊಂದಿರುವ ಕನ್ನಡ ಭಾಷೆಗೆ ಸುಮಾರು 2,500 ವರ್ಷಗಳ ಇತಿಹಾಸವಿದ್ದು, ಭಾಷಾ ಶ್ರೀಮಂತಿಕೆ ಎತ್ತಿ ಹಿಡಿಯುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಂಜುನಾಥ ಶಣೈ ಹೇಳಿದರು.

ಚಂದ್ರಗುತ್ತಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಸಮಿತಿಯಿಂದ ಶನಿವಾರ ಗಾಂಧಿ ವೃತ್ತದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾಡ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು. ಪ್ರತಿಯೊಬ್ಬರೂ ಭಾಷಾಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.

ಕವಿ ಹಾಗೂ ಸಾಹಿತಿಗಳು ತಮ್ಮ ಕೃತಿಗಳ ಮೂಲಕ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ್ದಾರೆ. ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿ ಬಂದಿರುವುದೇ ಇದಕ್ಕೆ ಸಾಕ್ಷಿ. ಮಕ್ಕಳಿಗೆ ಬಾಲ್ಯದಲ್ಲಿಯೇ ಕನ್ನಡಾಭಿಮಾನ ಬೆಳೆಸಬೇಕು. ವ್ಯಾವಹಾರಿಕವಾಗಿ ಕನ್ನಡವನ್ನು ಬಳಸಿದಾಗ ಭಾಷೆ ಮತ್ತಷ್ಟು ಶ್ರೀಮಂತವಾಗುತ್ತದೆ ಎಂದರು.

ಕನ್ನಡ ರಾಜ್ಯೋತ್ಸವ ಸಮಿತಿ ಅಧ್ಯಕ್ಷ ಕೃಷ್ಣಪ್ಪ, ಗ್ರಾಪಂ ಅಧ್ಯಕ್ಷೆ ಸರಿತಾ, ಗ್ರಾಪಂ ಸದಸ್ಯ ಎಂ.ಪಿ.ರತ್ನಾಕರ್, ತಾಪಂ ಮಾಜಿ ಸದಸ್ಯ ಎನ್.ಜಿ.ನಾಗರಾಜ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ್ ಮರಡಿ, ಪ್ರಮುಖರಾದ ಗೋಪಾಲ್ ಪೂಜಾರಿ, ಕೃಷ್ಣಮೂರ್ತಿ ಓಲೆಕಾರ್, ಪರಮೇಶ್, ಆನಂದ, ಗಣೇಶ್, ದಿವಾಕರ್ ಓಲೆಕಾರ್, ಶ್ರೀಧರ್, ಹರೀಶ್, ಶಶಾಂಕ್, ಧನುಷ್, ಸಂಜಯ್, ದೀಪು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net