

ಹೊಳೆಹೊನ್ನೂರು: ಪ್ರಾಥಮಿಕ ಹಂತದಲ್ಲಿ ಮಕ್ಕಳನ್ನು ಸಹಪಠ್ಯ ಚಟುವಟಿಕೆಯಲ್ಲಿ ತೊಡಗಿಸುವುದರಿಂದ ಶಾರೀರಿಕ ಹಾಗೂ ಮಾನಸಿಕವಾಗಿ ಸದೃಢರಾಗುತ್ತಾರೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಹರೀಶ್ ಹೇಳಿದರು.
ಪಟ್ಟಣ ಸಮೀಪದ ಕನಸಿನಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಸಿದ್ಲೀಪುರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳ ಸಮಗ್ರ ಬೆಳವಣಿಗೆಗೆ ಪೂರಕ ಕ್ರಿಯಾಯೋಜನೆ ರೂಪಿಸಿ ಕಾರ್ಯರೂಪಕ್ಕೆ ತರಲಾಗುತ್ತಿದೆ. ಪಾಲಕರು ಮಕ್ಕಳನ್ನು ಇತರ ಚಟುವಟಿಕೆಯಲ್ಲಿ ತೊಡಗಿಸಲು ಪ್ರೋತ್ಸಾಹಿಬೇಕು. ಶಾಲೆಯೊಂದಿಗೆ ನಿಕಟ ಸಂಪರ್ಕ ಇರಿಸಿಕೊಂಡು ಮಕ್ಕಳ ಪ್ರಗತಿ ಬಗ್ಗೆ ತಿಳಿದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಮತ್ತು ತಾಲೂಕು ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಯಿತು. ನಿವೃತ್ತ ಪ್ರಾಚಾರ್ಯ ಪ್ರೊ. ಶೇಖರಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಶಿಕ್ಷಕ ಚಿದಾನಂದ್, ಉಮಾ, ರೇಖಾ, ಮೋತಿ ಡಿಸೋಜ ಇತರರಿದ್ದರು.