ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಹಾರೈಕೆಗಳ ಸುರಿಮಳೆ

kumaraswamyjpg
Published on

ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಿಂಗಾಪುರದಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ತಮ್ಮ ಆಪ್ತರೊಂದಿಗೆ ಶುಕ್ರವಾರ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಐದು ದಿನದ ಬಳಿಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರನೇಕರು ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದಾರೆ. ಪ್ರಧಾನಿ ಮೋದಿ ಅವರು, ಕುಮಾರಸ್ವಾಮಿ ಅವರಿಗೆ ಶುಭ ಹಾರೈಸುವುದರ ಜತೆಗೆ ನಾವು ಕರ್ನಾಟಕ ಪ್ರಗತಿ ಬಗ್ಗೆ ನಿಕಟವಾಗಿ ಸಂವಹನ ನಡೆಸಿದ್ದೇವೆ. ಜನರ ಸೇವೆಯಲ್ಲಿ ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಅದಕ್ಕೆ ಪ್ರತಿಯಾಗಿ ಕುಮಾರಸ್ವಾಮಿ ಪ್ರಧಾನಿ ಮೋದಿ ಅವರಿಗೆ, ನಿಮ್ಮ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಚಿರಋಣಿ ಆಗಿದ್ದೇನೆ ಎಂದು ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕುಮಾರಸ್ವಾಮಿ ಅವರನ್ನು ಹರಿಸಿದ್ದಾರೆ. ನನ್ನ ಪುತ್ರ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ಭಗವಂತ ನಿಮಗೆ ಉತ್ತಮ ಆರೋಗ್ಯ, ಆಯುಷ್ಯ ಕರುಣಿಸಿ ಸುಧೀರ್ಘ ಅವಧಿ ಜನಸೇವೆ ಮಾಡುವ ಅವಕಾಶವನ್ನು ನೀಡಲಿ ಎಂದು ಹಾರೈಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಸಚಿವ ಎಂ.ಬಿ.ಪಾಟೀಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ, ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಸಿ.ಟಿ.ರವಿ, ಸಂಸದರಾದ ಜಿ.ಎಂ. ಸಿದ್ದೇಶ್ , ಪ್ರತಾಪ್ ಸಿಂಹ, ನಳೀನ್ ಕುಮಾರ್ ಕಟೀಲ್, ಜಗ್ಗೇಶ್, ಬಿ.ವೈ.ರಾಘವೇಂದ್ರ, ಅಣ್ಣಾ ಸಾಹೇಬ್ ಜೊಲ್ಲೆ, ಪ್ರಭಾಕರ್ ಕೋರೆ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಮಾಜಿ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಅನೇಕ ಗಣ್ಯರು ಕುಮಾರಸ್ವಾಮಿ ಅವರಿಗೆ ಶುಭ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net