ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಹರಿಯಾಣ ಮಾಜ ಸಿಎಂ ಮನೋಹರ್ ಲಾಲ್ ಖಟ್ಟರ್

Manohar Lal Khattar
Published on

ಹರಿಯಾಣ: ಮಹತ್ವದ ಬೆಳವಣಿಗೆ ಒಂದರಲ್ಲಿ ಹರಿಯಾಣ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಒಂದು ದಿನದ ಬಳಿಕ ಮಾಜಿ ಸಿಎಂ ಮನೊಹರ್​ ಲಾಲ್​ ಖಟ್ಟರ್​ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಹರಿಯಾಣ ವಿಧಾನಸಭೆಯನ್ನು ಉದ್ಧೇಶಿಸಿ ಮಾತನಾಡಿದ ಖಟ್ಟರ್​, ನಾನು ಇಂದು (ಮಾರ್ಚ್​ 13) ಕರ್ನಾಲ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಇಂದಿನಿಂದ ಕರ್ನಾಲ್​ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯನ್ನು ಸಿಎಂ ನಯಾಬ್​ ಸಿಂಗ್​ ಸೈನಿ ಅವರು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಹೆಚ್ಚಿದ್ದು, ಇದರ ಬೆನ್ನಲ್ಲೇ ಮನೋಹರ್ ಲಾಲ್​ ಖಟ್ಟರ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಇತ್ತ ಮನೋಹರ್​ ಲಾಲ್​ ಖಟ್ಟರ್​ ಅವರನ್ನು ಬಿಜೆಪಿ ಕರ್ನಾಲ್​ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಬಿಜೆಪಿ ಸಂಜಯ್​ ಭಾಟಿಯಾ ಪ್ರಸ್ತುತ ಹರಿಯಾಣ ಲೋಕಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಹಿರಿಯ ನಾಯಕ ಖಟ್ಟರ್​ಗೆ ದಾರಿ ಮಾಡಿಕೊಡಲಿದ್ದಾರ ಎಂದು ಕಾದು ನೋಡಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net